ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಎದುರಾಯ್ತು ವಿಘ್ನ
ಬೆಂಗಳೂರು,ಆ.17- ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಸಂದ ಬಳಿಕ ಧ್ವಜಾರೋಹಣ ನೆರವೇರಿದ ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ವಿಘ್ನ ಎದುರಾಗಿದೆ. ಸೂಕ್ಷ್ಮ ಪ್ರದೇಶವಾಗಿರುವ ಚಾಮರಾಜಪೇಟೆ ಮೈದಾನದಲ್ಲಿ ಯಾವುದೆ ಕಾರಣಕ್ಕೂ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬಾರದು ಎಂದು ಪೊಲೀಸರು ಬಿಬಿಎಂಪಿ ಮತ್ತು ಕಂದಾಯ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ. ಒಂದು ವೇಳೆ ಗಣೇಶ ಉತ್ಸವಕ್ಕೆ ಅವಕಾಶ ನೀಡಿದರೆ ಕೋಮು ಸಾಮರಸ್ಯ ಹಾಳಾಗುವ ಸಾಧ್ಯತೆಗಳಿರುವುದರಿಂದ ಯಾವುದೇ ಕಾರಣಕ್ಕೂ ಗಣೇಶೋತ್ಸವಕ್ಕೆ ಅವಕಾಶ ನೀಡಬಾರದು ಎಂದು ಪೊಲೀಸ್ ಇಲಾಖೆ ಮನವಿ […]