ಚಾಮುಂಡಿ ದರ್ಶನ ಟಿಕೆಟ್ ದರ ದಿಡೀರ್ ಏರಿಕೆ: ಭಕ್ತರ ಆಕ್ರೋಶ

ಮೈಸೂರು,ಜ.2- ಹೊಸ ವರ್ಷ ಪ್ರಾರಂಭ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಆದರೆ ಮೈಸೂರಿನಲ್ಲಿ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. 300ರೂ.ಗಳ ವಿಶೇಷ ದರ್ಶನವೆಂದು ಹಣ ಪಡೆಯುತ್ತಿದ್ದು, ಆಡಳಿತ ಮಂಡಳಿಯ ವಿರುದ್ಧ ಹಗಲು ದರೋಡೆ ನಡೆಸುತ್ತಿದ್ದಾರೆ ಎಂದು ಭಕ್ತರು ಆರೋಪಿಸಿದ್ದಾರೆ. ಹೊಸವರ್ಷದ ಪ್ರಯುಕ್ತ ನಿನ್ನೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ತಾಯಿಯ ದರ್ಶನಕ್ಕೆ ಆಗಮಿಸಿದ್ದಾರೆ. ಕಳೆದೆರಡು ವರ್ಷಗಳಿಂದ ಕೊರೋನಾ ಹಿನ್ನೆಲೆಯಲ್ಲಿ ನಿರ್ಬಂಧವನ್ನು ವಿಧಿಸಲಾಗಿತ್ತು. ಈ ಬಾರಿ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ಯಾವುದೇ ಅಡ್ಡಿ […]