ವಾಹನಗಳನ್ನು ತಡೆದು ದಾಖಲೆ ಪರಿಶೀಲಿಸದಂತೆ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ

ಬೆಂಗಳೂರು,ಜು.17- ಚಾಲಕರ ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ಪದೇ ಪದೇ ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಈ ಹಿಂದಿನ ಆದೇಶವನ್ನು ಪಾಲನೆ ಮಾಡದೆ, ವಾಹನ ಚಾಲಕರಿಗೆ ಅನಗತ್ಯವಾಗಿ ತೊಂದರೆ ಕೊಟ್ಟರೆ, ಅಂತಹವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆಗಳಿಗೆ ಈ ಆದೇಶ ಅನ್ವಯವಾಗಲಿದೆ. ಇದರನ್ವಯ ಮದ್ಯಪಾನ ಸೇವಿಸಿ ಯಾರಾದರೂ ವಾಹನ ಚಾಲನೆ […]