ರಾಹುಲ್ ಯಾತ್ರೆಯಿಂದ ಮಂಡ್ಯದಲ್ಲಿ ಕಾಂಗ್ರೆಸ್ ಅಲೆ ಸೃಷ್ಟಿಯಾಗಿದೆ : ಚಲುವರಾಯಸ್ವಾಮಿ

ಮಂಡ್ಯ,ಅ.9- ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರು ಮಂಡ್ಯ ಜಿಲ್ಲೆಯಲ್ಲಿ ಭಾರತ ಜೋಡೊ ಯಾತ್ರೆ ಸಂಚರಿಸಿದ ನಂತರ ಜಿಲ್ಲೆಯಲ್ಲಿ ಹೊಸ ಹುಮ್ಮಸ್ಸು ಉಂಟಾಗಿದ್ದು, ಕಾಂಗ್ರೆಸ್ ಅಲೆ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಪ್ರಸ್ತುತ ರಾಜಕೀಯದಲ್ಲಿ ಕಾಂಗ್ರೆಸ್ ಪಕ್ಷವೇ ಮುಂಚೂಣಿಯಲ್ಲಿದೆ, ಭಾರತ ಜೋಡೋ ಯಾತ್ರೆಯಿಂದ ನಮ್ಮ ಪಕ್ಷಕ್ಕೆ ಲಾಭವಾಗುವುದು ಖಚಿತ ಎಂದು ವಿವರಿಸಿದರು. ದೇಶದಲ್ಲಿ ಹಿಂದೆ ಯಾತ್ರೆಗಳು ನಡೆದಿವೆ, ಅಡ್ವಾಣಿ ಅವರು ರಥಯಾತ್ರೆ ಮಾಡಿದರು. […]