ಚೆನ್ನೈ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದ ರೌಡಿ ಶೀಟರ್ ಅರೆಸ್ಟ್

ಚೆನ್ನೈ ಫೆ. 10- ದ್ವಿಚಕ್ರ ವಾಹನಗಳಲ್ಲಿ ಬಂದ ದುಷ್ಕರ್ಮಿಗಳು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಚೆನ್ನೈನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಸಿಸಿ ಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ನಂದನಂ ನಿವಾಸಿ ರೌಡಿ ಶೀಟರ್ ವಿನೋದ್ ಎಂಬಾತನನ್ನು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಆರೋಪಿ ಅಪರಾಧ ಹಿನ್ನಲೆಯ ಅಸಾಮಿಯಾಗಿದ್ದು ಹಣ ಪಡೆದು ಪೆಟ್ರೋಲ್ ಬಾಂಬ್ ಎಸೆಯುವುದರಲ್ಲಿ ಹೆಸರುವಾಸಿಯಾಗಿದ್ದಾನೆ. ನೀಟ್ ಮಸೂದೆಯನ್ನು ಬಿಜೆಪಿ ಬೆಂಬಲಿಸಿದ್ದಕ್ಕೆ ಬೇಸರಗೊಂಡು ಪೆಟ್ರೋಲ್ ಬಾಂಬ್ ಎಸೆದಿರುವುದಾಗಿ ವಿಚಾರಣೆ ವೇಳೆ ಆರೋಪಿ […]