ಈ ಬಾರಿ ಸೂರ್ಯ ಕಾಣುವ ಸಮಯದಲ್ಲೇ ಬಿಬಿಎಂಪಿ ಬಜೆಟ್ ಮಂಡನೆ

ಬೆಂಗಳೂರು, ಜ.23- ಈ ಬಾರಿ ಯಾವುದೇ ಕಾರಣಕ್ಕೂ ರಾತ್ರೋ ರಾತ್ರಿ ಬಿಬಿಎಂಪಿ ಬಜೆಟ್ ಮಂಡನೆ ಮಾಡುವುದಿಲ್ಲ. ಹಗಲು ವೇಳೆ, ಅದರಲ್ಲೂ ಸೂರ್ಯ ಕಾಣುವ ಸಮಯದಲ್ಲಿಯೇ 2023-24ನೇ ಸಾಲಿನ ಆಯವ್ಯಯ ಮಂಡಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪ್ರಸ್ತುತ ಸಾಲಿನ ಆಯವ್ಯಯ ಕುರಿತು ಜನಾಭಿಪ್ರಾಯ ವರದಿ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಳೆದ ವಾರ್ಷಿಕ ಸಾಲಿನಲ್ಲಿ ರಾತ್ರಿ 11.30ಕ್ಕೆ ಪಾಲಿಕೆ ಆಯವ್ಯಯ ಸ್ವೀಕೃತಿ ಮತ್ತು ಪಾವತಿಯ ಪಟ್ಟಿಯನ್ನು ಪಾಲಿಕೆ ವೆಬ್ಸೈಟ್ […]

ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನಕ್ಕೆ ಮುಖ್ಯ ಆಯುಕ್ತರಿಂದ ಚಾಲನೆ

ಬೆಂಗಳೂರು,ಜ.21- ಮೂಲಭೂತ ಸೌಲಭ್ಯ ಗಳನ್ನು ಕಲ್ಪಿಸುವ ಭರದಲ್ಲಿ ನಗರದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಪರಿಸರಕ್ಕೆ ಹಾನಿಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಬಿಬಿಎಂಪಿ ವತಿಯಿಂದ ಕೋಟಿ ವೃಕ್ಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದರು. ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕೋಟಿ ವೃಕ್ಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅರಣ್ಯ ಇಲಾಖೆ, ಪಾಲಿಕೆಯ ಅರಣ್ಯ ವಿಭಾಗವು ಸಮನ್ವಯ ಮಾಡಿಕೊಂಡು ನಗರದಾದ್ಯಂತ ಯತೇಚ್ಛವಾಗಿ ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಅದರ ಜೊತೆಗೆ ಕೋಟಿ […]

ಬಿಬಿಎಂಪಿ ಮುಖ್ಯ ಆಯುಕ್ತರ ತಲೆದಂಡವಾದರೆ ಉಗ್ರ ಹೋರಾಟ ಎಚ್ಚರಿಕೆ

ಬೆಂಗಳೂರು,ನ.30- ಚಿಲುಮೆ ಕರ್ಮಕಾಂಡಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ತಲೆದಂಡವಾಗಲು ದಿನಗಣನೆ ಆರಂಭವಾಗುತ್ತಿದ್ದಂತೆ ಯಾವುದೇ ಕಾರಣಕ್ಕೂ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಬಾರದು ಒಂದು ವೇಳೆ ಸರ್ಕಾರ ಇಂತಹ ಕಾರ್ಯಕ್ಕೆ ಮುಂದಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಎಚ್ಚರಿಕೆ ನೀಡಿದೆ. ಚಿಲುಮೆ ಸಂಸ್ಥೆಯವರು ಮಾಡಿರುವ ಕರ್ಮಕಾಂಡಕ್ಕೆ ಈಗಾಗಲೇ ದಕ್ಷ ಅಧಿಕಾರಿ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಲಾಗಿದೆ. ಇದೀಗ ದಕ್ಷ ಅಧಿಕಾರಿಯಾಗಿರುವ […]

ನಡೆದುಕೊಂಡು ಹೋಗಿ ಜನರ ಸಮಸ್ಯೆ ಆಲಿಸಿದ ಬಿಬಿಎಂಪಿ ಆಯುಕ್ತರು

ಬೆಂಗಳೂರು,ಅ.18- ಸಮಸ್ಯೆಗಳ ಆಗರವಾಗಿರುವ ನಗರದಲ್ಲಿ ಅಷ್ಟದಿಕ್ಕುಗಳಲ್ಲೂ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸಾರ್ವಜನಿಕರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಿಕೊಡುವ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ. ನಿನ್ನೆ ಪೂರ್ವ ವಲಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದ ಮುಖ್ಯ ಆಯುಕ್ತರು ಇಂದು ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಕಾಲ್ನಡಿಗೆಯ ಮುಖಾಂತರ ಸಮಸ್ಯೆಗಳ ಖುದ್ದು ಪರಿವೀಕ್ಷಣೆ ನಡೆಸಿದರು. ಬೆಳಿಗ್ಗೆ 6.30 ರಿಂದ 9.30ರವರೆಗೆ ಸುಮಾರು 6 ಕಿ.ಮೀ ದೂರದವರೆಗೂ ಕಾಲ್ನಡಿಗೆ ಮೂಲಕ ವಾಟಾಳ್ ನಾಗರಾಜ್ […]

ರಾಜಧಾನಿಯಲ್ಲಿ ಮುಂದುವರೆಯಲಿದೆ ಒತ್ತುವರಿ ತೆರವು ಕಾರ್ಯ : ತುಷಾರ್ ಗಿರಿನಾಥ್

ಬೆಂಗಳೂರು,ಅ.17- ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಕೈ ಬಿಡುವ ಪ್ರಶ್ನೆಯೇ ಇಲ್ಲ. ಆದಷ್ಟು ಬೇಗ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದ್ದಾರೆ. ನಗರದ ಪೂರ್ವ ವಲಯದ ಹೆಣ್ಣೂರು ಮುಖ್ಯ ರಸ್ತೆ, ಬಾಣಸವಾಡಿ ಮತ್ತಿತರ ಪ್ರದೇಶಗಳಿಗೆ ಕಾಲ್ನಡಿಗೆಯಲ್ಲಿ ತೆರಳಿ ಸಾರ್ವಜನಿಕರಿಂದ ಸಮಸ್ಯೆ ಆಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜಕಾಲುವೆ ಒತ್ತುವರಿ ತೆರವಿನಲ್ಲಿ 504 ಸ್ವತ್ತು ಇದೆ. ಎಲ್ಲದಕ್ಕೂ ನೋಟೀಸ್ ನೀಡುತ್ತೇವೆ ನಂತರ ತೆರವು ಕಾರ್ಯ ಆರಂಭಿಸಲಾಗುವುದು ಎಂದು ಅವರು […]

ಒತ್ತುವರಿ ತೆರವಿನಲ್ಲಿ ತಾರತಮ್ಯ ಮಾಡಿಲ್ಲ : ತುಷಾರ್ ಗಿರಿನಾಥ್

ಬೆಂಗಳೂರು,ಅ.11- ನಗರದಲ್ಲಿ ನಡೆಸಲಾಗುತ್ತಿರುವ ಒತ್ತುವರಿಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದರಿಂದ ಕೆಲವು ಕಡೆ ಒತ್ತುವರಿ ಮಾಡಲು ಸಾಧ್ಯವಾಗಿಲ್ಲ. ಉಳಿದಂತೆ ಎಲ್ಲ ಕಡೆ ನಾವು ಒತ್ತುವರಿ ತೆರವು ಕಾರ್ಯಚರಣೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು. ನಮಗೆ ಶ್ರೀಮಂತರು ಮತ್ತು ಬಡವರು ಅಂತ ಭೇದಭಾವ ಇಲ್ಲ. ಅಪಾರ್ಟ್ಮೆಂಟ್ಗಳ ಒತ್ತುವರಿ ತೆರವು ಮಾಡಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ರೈನ್ಬೋ ಅಪಾರ್ಟ್ […]