ಜ.8ರೊಳಗೆ 15ರಿಂದ 18 ವರ್ಷದ ಎಲ್ಲಾ ಮಕ್ಕಳಿಗೆ ಲಸಿಕೆ

ಬೆಂಗಳೂರು, ಜ.6- ಇದೇ ಜನವರಿ 8ರೊಳಗೆ ದೇಶದ ಎಲ್ಲ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ನಿರೋಧಕ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸವೇಶ್ವರ ನಗರದ ಕಿರ್ಲೋಸ್ಕರ್ ಕಾಲೋನಿಯಲ್ಲಿರುವ ಶ್ರೀ ಅರಬಿಂದೋ ವಿದ್ಯಾ ಮಂದಿರದಲ್ಲಿಂದು ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 135 ಕೋಟಿ ಜನಸಂಖ್ಯೆ ಹೊಂದಿರುವ ಭಾರತದಂತಹ ದೊಡ್ಡ ದೇಶದಲ್ಲಿ ವ್ಯಾಪಕವಾಗಿ ಲಸಿಕೆ ನೀಡುವುದು ಕಷ್ಟದ […]