ಮಕ್ಕಳ ಲಸಿಕೆಗೆ ಪೋಷಕರು ಸಹಕಾರ ನೀಡಿ: ಸಚಿವ ನಾಗೇಶ್

ಬೆಂಗಳೂರು,ಜ.3- ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿರುವ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಕಾರ ನೀಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕರೆ ನೀಡಿದ್ದಾರೆ. ಕೋವಿಡ್ ಜೊತೆ ಜೀವನ ನಡೆಸುವುದು ಅನಿವಾರ್ಯವಾಗಿದ್ದು, ಕೋವಿಡ್ ಎದುರಿಸಲು ಎಲ್ಲರೂ ಲಸಿಕೆ ಪಡೆಯುವುದು ಅಗತ್ಯ. ಹೀಗಾಗಿ ಉಚಿತವಾಗಿ ನೀಡುತ್ತಿರುವ ಕೋವಿಡ್ ಲಸಿಕೆಯನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೇಶದ 145 ಕೋಟಿ ಜನರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ಕೇಂದ್ರ […]