ಮಕ್ಕಳ ಲಸಿಕಾ ಅಭಿಯಾನಕ್ಕೆ ಕೌಂಟ್‍ಡೌನ್, ಲಸಿಕೆ ಪಡೆದ ಮಕ್ಕಳಿಗೆ ರಜೆ..?

ಬೆಂಗಳೂರುಜ.1- ದೇಶದಲ್ಲಿ ರೂಪಾಂತರಗೊಂಡ 3ನೇ ಕೋವಿಡ್ ಅಲೆ ಬರಬಹುದೆಂಬ ಎಚ್ಚರಿಕೆಯ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಹಾಗೂ ಶಾಸಕರು ಸೇರಿದಂತೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಲಸಿಕಾ ಅಭಿಯಾನಕ್ಕೆ ಚಾಲನೆ ದೊರಕಲಿದೆ. ದೇಶದಲ್ಲಿ ಕೋವಿಡ್ ಮಹಾಮಾರಿ ಬಂದು ಸರಿಸುಮಾರು ಎರಡು ವರ್ಷಗಳ ನಂತರ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡುತ್ತಿರುವುದು ಇದೇ ಮೊದಲು. ಕರ್ನಾಟಕದಲ್ಲಿ ಈ ಕೋವಿಡ್ ಲಸಿಕೆಯನ್ನು ಯಶಸ್ವಿಗೊಳಿಸಲು […]