ಮಕ್ಕಳ ಲಸಿಕಾ ಅಭಿಯಾನ ಯಶಸ್ಸಿಗೆ ಸಿಎಂ ಸೂಚನೆ

ಬೆಂಗಳೂರುಜ.1- ಸೋಮವಾರದಿಂದ ರಾಜ್ಯಾದ್ಯಂತ ಆರಂಭವಾ ಗಲಿರುವ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ನಡೆಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಔಪಚಾರಿಕವಾಗಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸೂಚನೆಯಂತೆ ಸೋಮವಾರ ರಾಜ್ಯಾದ್ಯಂತ 15ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ. ಅಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು, ಕೋವಿಡ್ ವಾರಿಯರ್ಸ್‍ಗಳು ಮತ್ತಿತರರು ಇದರಲ್ಲಿ ಭಾಗವಹಿಸಬೇಕೆಂದು ಸೂಚನೆ ನೀಡಿದರು. […]