ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಿಬಿಎಂಪಿಯಿಂದ ನೋಟಿಸ್

ಬೆಂಗಳೂರು,ಫೆ.12- ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿಕೊಂಡ ಆರೋಪಕ್ಕೆ ಗುರಿಯಾಗಿರುವ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಬಿಬಿಎಂಪಿ ನೋಟೀಸ್ ಜಾರಿ ಮಾಡಿದೆ. ಶಾಂತಲಾ ನಗರ ವಾರ್ಡ್ ವ್ಯಾಪ್ತಿಯಲ್ಲಿರುವ ಕೆಎಸ್‍ಸಿಎ ಒಡೆತನದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಪಕ್ಕದ ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ದೂರನ್ನಾಧರಿಸಿ ಬಿಬಿಎಂಪಿ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನ ಗೇಟ್ ನಂಬರ್ 8 ರಿಂದ 11 ರವರೆಗಿನ ದ್ವಾರ ಇರುವ ರಸ್ತೆ ಬಿಬಿಎಂಪಿಗೆ ಸೇರಿದ್ದಾಗಿದೆ. ಆದರೆ, ಸ್ಟೇಡಿಯಂನವರು ಸಾರ್ವಜನಿಕ ರಸ್ತೆಯನ್ನು ಅಭಿವೃದ್ಧಿಪಡಿಸುವ ಭರವಸೆ ನೀಡಿ […]