ಅ.27-28ರಂದು ಅಖಿಲ ಭಾರತ ಗೃಹ ಸಚಿವರ ಸಮ್ಮೇಳನ, ಶಿಕ್ಷೆ ಪ್ರಮಾಣ ಹೆಚ್ಚಿಸುವ ಚರ್ಚೆ

ಬೆಂಗಳೂರು,ಅ.25- ಅಖಿಲ ಭಾರತ ಗೃಹ ಸಚಿವರ ಸಮ್ಮೇಳನವು ಹರಿಯಾಣದ ಸೂರಜ್‍ಕುಂಡ್‍ನಲ್ಲಿ ಅ.27-28ರಂದು ನಡೆಯಲಿದ್ದು, ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿಸುವ ಕುರಿತಂತೆ ಗಂಭೀರ ಚರ್ಚೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮ್ಮೇಳನದಲ್ಲಿ ರಾಜ್ಯದ ಗೃಹಸಚಿವ ಆರಗ ಜ್ಞಾನೇಂದ್ರ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಎಲ್ಲ ರಾಜ್ಯಗಳ ಪೊಲೀಸ್ ಮುಖ್ಯಸ್ಥರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ಅಪರಾಧಗಳನ್ನು ಪತ್ತೆಹಚ್ಚಲು ಕೈಗೊಂಡಿರುವ ವೈಜ್ಞಾನಿಕ ಕ್ರಮಗಳ ಬಗ್ಗೆ ಸಮ್ಮೇಳನದಲ್ಲಿ ವಿಷಯ ಮಂಡನೆ ಮಾಡಲಾಗುತ್ತದೆ. ಅಪರಾಧ ಪ್ರಕರಣಗಳಲ್ಲಿ ನಿರೀಕ್ಷಿತ […]