ದೇವಸ್ಥಾನಗಳಿಗೆ ನೀಡಿದ್ದ ‘ಗಂಟೆ’ ಸುತ್ತೋಲೆ ಹಿಂಪಡೆದ ಧಾರ್ಮಿಕ ದತ್ತಿ ಇಲಾಖೆ

ಬೆಂಗಳೂರು,ಫೆ.16- ದೇವಸ್ಥಾನಗಳಲ್ಲಿ ಜಾಗಟೆ, ಗಂಟೆ, ಶಂಖ ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ ಎಂಬ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆಯು ತನ್ನ ಆದೇಶವನ್ನು ಹಿಂಪಡೆದಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕರಾದ ಸಿ.ಟಿ.ರವಿ ಮತ್ತು ರವಿಸುಬ್ರಹ್ಮಣ್ಯ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದರು. ಯಾವ ಧಾರ್ಮಿಕ ಕೇಂದ್ರಗಳಲ್ಲಿ ಮುಂಜಾನೆ ಈ ರೀತಿಯ […]