ನಾಳೆಯಿಂದ ರಾಜ್ಯಾದ್ಯಂತ ಪೌರಕಾರ್ಮಿಕರ ಮುಷ್ಕರ

ಬೆಂಗಳೂರು,ಜ.31- ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ಮಾಡುತ್ತಿರುವ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು ಹಾಗೂ ನೀರು ಸರಬರಾಜು ಸಹಾಯಕರು ಉದ್ಯೋಗ ಖಾಯಂಗೊಳಿಸಲು ಒತ್ತಾಯಿಸಿ ನಾಳೆಯಿಂದ ಕೆಲಸ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ, ತಹಸೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವ ಧರಣಿ ಕೈಗೊಳ್ಳಲು ನಿರ್ಧರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ರಾಜಾ್ಯಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಪೌರಕಾರ್ಮಿಕರನ್ನು ಕಾಯಂಗೊಳಿಸಲು ಮುಂದಾಗಿರುವ ಸರ್ಕಾರ, ಕಸ ವಿಲೇವಾರಿ ವಾಹನ ಚಾಲಕರು, ಸಹಾಯಕರು, ನೀರು ಪೂರೈಕೆದಾರರನ್ನು […]