ಸರ್ವೋಚ್ಚ ನ್ಯಾಯಾಲಯದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್

ನವದೆಹಲಿ.ಅ.11- ಭಾರತದ ಸರ್ವೋಚ್ಚ ನ್ಯಾಯಾಲಯದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಮುಂದಿನ ತಿಂಗಳು ಪದಗ್ರಹಣ ಮಾಡಲಿದ್ದಾರೆ. ಸುಪೀಂ ಕೋರ್ಟ್ನ ಪೂರ್ಣಪ್ರಮಾಣದ ನ್ಯಾಯಮೂರ್ತಿಗಳ ಕೊಲಜಿಯಂ ಸಭೆಯಲ್ಲಿ ಚರ್ಚೆ ನಂತರ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ. ಇದರೊಂದಿಗೆ ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 9 ರಂದು ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಮತ್ತು ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಎಂದು ಮೂಲಗಳು ತಿಳಿಸಿವೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಲಲಿತ್..?

ನವದೆಹಲಿ. ಆ.4 – ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸ್ಥಾನವನ್ನು ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಮೂರ್ತಿ ಉದಯ್ ಲಲಿತ್ ಅವರು ಅಲಂಕರಿಸುವ ಸಾಧ್ಯತೆ ಇದೆ. ತ್ರಿವಳಿ ತಲಾಖ್ ಸೇರಿದಂತೆ ಹಲವು ಮಹತ್ವದ ತೀರ್ಪುಗಳನ್ನು ನೀಡಿ ದೇಶದ ಗಮನ ಸೆಳೆದಿದ್ದ ಅವರು ಆಗಸ್ಟ್ 27 ರಂದು ಭಾರತದ 49 ನೇ ಸಿಜೆಐ ಆಗಲಿದ್ದಾರೆ. ನ್ಯಾಯಮೂರ್ತಿ ಲಲಿತ್ ಅವರು ಆ ಸ್ಥಾನಕ್ಕೆ ಏರಿದರೆ ವಕೀಲರ ಪರಿಷತ್(ಬಾರ್ )ನಿಂದ ನೇರವಾಗಿ ಸುಪ್ರೀಂ ಕೋರ್ಟ್ ಪೀಠಕ್ಕೆ ಏರಿದ ಎರಡನೇ ಸಿಜೆಐ ಆಗುತ್ತಾರೆ. […]