ನಾಯಕತ್ವ ಬದಲಾವಣೆ ಇಲ್ಲ, ನಾನು ಯಾರ ಕೈಗೊಂಬೆಯೂ ಅಲ್ಲ : ಸಿಎಂ ಸ್ಪಷ್ಟನೆ

ಬೆಂಗಳೂರು,ಆ.27- ನಾಯಕತ್ವ ಬದಲಾವಣೆ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕೇಂದ್ರ ಬಿಜೆಪಿ ವರಿಷ್ಠರು ನನಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಹೇಳಿದ್ದಾರೆ. ತಮ್ಮನ್ನು ವಿಧಾನಸಭೆ ಚುನಾವಣೆಗೂ ಮುನ್ನವೇ ಬದಲಾಯಿಸಿ ಬೇರೊಬ್ಬರಿಗೆ ಸಾರಥ್ಯ ನೀಡಲಾಗುತ್ತದೆ ಎಂಬುದರಲ್ಲಿ ಯಾವುದೇ ಹುರುಳಿಲ್ಲ. ನನಗೆ ಕೇಂದ್ರ ಬಿಜೆಪಿ ನಾಯಕರ ಸಂಪೂರ್ಣ ಬೆಂಬಲವಿದೆ. ಆಡಳಿತ ಯಾರೊಬ್ಬರು ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ತಿಳಿಸಿದರು. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ನಾಯಕತ್ವ ಬದಲಾವಣೆಯಾಗುತ್ತದೆಎಂಬ ಪುಕಾರು ಕೇಳಿಬರುತ್ತದೆಯಲ್ಲ ಎಂಬುದಕ್ಕೆ ಪ್ರತಿಕ್ರಿಯಿಸಿದ […]