ಒಂದು ವಾರ ಶಾಲಾ-ಕಾಲೇಜು ಮುಚ್ಚಿ : ಡಿಕೆಶಿ ಸಲಹೆ
ಬೆಂಗಳೂರು,ಫೆ.8- ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳನ್ನು ಒಂದು ವಾರಗಳ ಕಾಲ ಮುಚ್ಚಿಸಿ, ಪರಿಸ್ಥಿತಿ ತಿಳಿಯಾಗುವವರೆಗೂ ಆನ್‍ಲೈನ್ ತರಗತಿಗಳನ್ನು ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲಹೆ ನೀಡಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ಬರುವವರೆಗೂ ಕಾಯಬೇಕು. ಸಮಾಜದಲ್ಲಿ ಶಾಂತಿ ಕಾಪಾಡಲು ಒಂದು ಕಠಿಣ ತೀರ್ಮಾನ ಕೈಗೊಳ್ಳಬೇಕು. ನಮ್ಮ ದೇಶವನ್ನು ಇಡೀ ವಿಶ್ವ ನೋಡುತ್ತಿದೆ. ಇಂತಹ ಗೊಂದಲ, ಘಟನೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಮನವಿ ಮಾಡಿದರು. ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳು […]