ಕಾಶ್ಮೀರದಲ್ಲಿ ಭಾರತ್ ಜೋಡೊ ಯಾತ್ರೆಗೆ ತೆರೆ

ನವದೆಹಲಿ,ಜ.30- ಕಳೆದ 134 ದಿನಗಳಿಂದ ನಡೆದಿದ್ದ ಭಾರತ ಜೋಡೋ ಯಾತ್ರೆ ಕೊನೆಯ ದಿನವಾದ ಇಂದು ಶ್ರೀನಗರದಲ್ಲಿ ಸಮಾರೋಪ ಸಮಾರಂಭ ನಡೆಯಿತು. ಇದಕ್ಕೂ ಮುನ್ನಾ ಶ್ರೀನಗರದ ಕಾಂಗ್ರೆಸ್ ಕಚೇರಿಯಲ್ಲಿ ರಾಹುಲ್‍ಗಾಂಧಿ ರಾಷ್ಟ್ರಧ್ವಜವನ್ನು ಹಾರಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಸ್ಥಳೀಯ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು. ಧ್ವಜಾ ರೋಹಣ, ಸಮಾರೋಪ ಸೇರಿದಂತೆ ಶ್ರೀನಗರದಲ್ಲಿ ಕಾಂಗ್ರೆಸ್ ನಾಯಕರ ಕಾರ್ಯಕ್ರಮಗಳಿಗೆ ವ್ಯಾಪಕ ಭದ್ರತೆ ಒದಗಿಸಲಾಗಿತ್ತು. ಮಂಜು ತುಂತುರು ನಿರಂತರವಾಗಿ ಸುರಿಯುತ್ತಿತ್ತು. […]

ಹಾಸನಾಂಭ ದರ್ಶನಕ್ಕೆ ಇಂದು ತೆರೆ

ಹಾಸನ, ಅ.27- ಹನ್ನೆರಡು ದಿನಗಳ ಕಾಲ ಲಕ್ಷಾಂತರ ಭಕ್ತರಿಗೆ ದರ್ಶನ ನೀಡಿದ ನಗರದ ಅಧಿದೇವತೆ ಹಾಸನಾಂಬೆ ದೇಗುಲದ ಬಾಗಿಲನ್ನು ಇಂದು ಮಧ್ಯಾಹ್ನ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಮುಚ್ಚಲಾಯಿತು. ದೀಪಾವಳಿ ಸಂದರ್ಭದಲ್ಲಿ ಹಾಸನಾಂಬ ದೇವಾಲಯದ ಬಾಗಿಲು ತೆರೆದಿದ್ದು, ಈ ಬಾರಿ 12 ದಿನಗಳ ಕಾಲ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ರಾಜ್ಯ ಸೇರಿದಂತೆ ಹೊರರಾಜ್ಯ ಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದಿದ್ದರು. ಕೊನೆಯ ದಿನವಾದ ನಿನ್ನೆ ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ […]