ರಾಜ್ಯದ ಮತ್ತಷ್ಟು ಪ್ರಗತಿಗೆ ಸಿಎಂ ಬೊಮ್ಮಾಯಿ ಸಂಕಲ್ಪ

ಬೆಂಗಳೂರು,ಜ.28- ರಾಜ್ಯದ ಆರ್ಥಿಕ ಹಿತದೃಷ್ಟಿಯಿಂದ ಉತ್ತಮ ಬಜೆಟ್ ನೀಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ತಮ್ಮ ನಿವಾಸದದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನೊಂದು ವರ್ಷದಲ್ಲಿ ಚುನಾವಣೆ ಕೂಡ ಬರುತ್ತಿದೆ. ಆರ್ಥಿಕ ಸ್ಥಿತಿಗತಿಯನ್ನು ಗಮನದಲ್ಲಿರಿಸಿಕೊಂಡು ರಾಜ್ಯದ ಸಮಗ್ರ ಬೆಳವಣಿಗೆ ದೃಷ್ಟಿಯಿಂದ ಉತ್ತಮವಾದ ಬಜೆಟ್ ನೀಡಬೇಕಿದೆ ಎಂದರು. ನನ್ನ ನೇತೃತ್ವದ ಸರ್ಕಾರಕ್ಕೆ ಈಗ ಆರು ತಿಂಗಳಾಗಿದೆ. ರಾಜ್ಯವನ್ನು ಇನ್ನಷ್ಟು ಅಭಿವೃದ್ಧಿಯತ್ತ ಮುನವ್ನಡೆಸಬೇಕಿದೆ.ಹಿರಿಯರು, ಹೈಕಮಾಂಡ್ ಮಾರ್ಗದರ್ಶನದಲ್ಲಿ, ಕಿರಿಯರ ಸಹಕಾರದಲ್ಲಿ ಕೆಲಸ ಮಾಡಲು ನನಗೆ ಅಪಾರ ಪ್ರೋತ್ಸಾಹ ಸಿಗುತ್ತಿದೆ ಇದರಿಂದ […]

ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿಎಂ ಬೊಮ್ಮಾಯಿ, ಶುಭ ಕೋರಿದ ಗಣ್ಯರು

ಬೆಂಗಳೂರು,ಜ.28-ಮುಖ್ಯಮಂತ್ರಿಯಾಗಿ ಯಶಸ್ವಿ ಆರು ತಿಂಗಳು ಪೂರೈಸಿರುವುದರ ಜೊತೆಗೆ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅನೇಕ ಗಣ್ಯರು ಶುಭ ಕೋರಿದ್ದಾರೆ.  ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ದೂರವಾಣಿ ಕರೆ ಮಾಡಿ ಹುಟ್ಟುಹಬ್ಬದ ಶುಭ ಕೋರಿ ಉಳಿದಿರುವ ಅವಧಿಯಲ್ಲಿ ಜನತೆಯ ಆಶೋತ್ತರಗಳಿಗಾಗಿ ಆಡಳಿತ ನಡೆಸಬೇಕು ಎಂದು ಸಲಹೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಸಿಎಂ ಹುಬ್ಬಕ್ಕೆ ಶುಭ ಹಾರೈಸಿದ್ದಾರೆ. ಟ್ವೀಟ್ ಮಾಡಿರುವ ಅವರು ಸಿಎಂ ಬೊಮ್ಮಾಯಿ ಅವರಿಗೆ ಜನ್ಮದಿನದ ಆರ್ಥಿಕ ಶುಭಾಶಯಗಳು. […]