ರಾಜ್ಯದಲ್ಲಿ ಬಿಜೆಪಿ ಪರ ಗಟ್ಟಿ ಅಲೆ ಇದೆ : ಬೊಮ್ಮಾಯಿ

ಹುಬ್ಬಳ್ಳಿ, ಜ. 29 – ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಒಂದು ದಿನದ ಭೇಟಿ ಸಂಚಲನ ಉಂಟು ಮಾಡಿದ್ದು , ಕರ್ನಾಟಕದಲ್ಲಿ ಬಿಜೆಪಿ ಪರವಾದ ಅಲೆ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಬಹಳ ಗಟ್ಟಿ ಹಾಗೂ ಪ್ರಬಲವಾಗಿದೆ. ಅದಕ್ಕೆ ಇನ್ನಷ್ಟು ಶಕ್ತಿ, ಹುರುಪು,ಹುಮ್ಮಸ್ಸನ್ನು ಅಮಿತ್ ಶಾ ನೀಡಿದ್ದಾರೆ. ಸಾರ್ವಜನಿಕರಲ್ಲಿರುವ ಪಕ್ಷದ ಪರವಾದ ಭಾವನೆಗಳು ಎಲ್ಲಾ ಸಭೆಗಳಲ್ಲಿ ವ್ಯಕ್ತವಾಗಿದೆ ಎಂದರು. ಕಾಂಗ್ರೆಸ್ ನವರು ನಾವೇ ರಾಜ್ಯದಲ್ಲಿ […]