ಮುಂದಿನ ದಿನಗಳಲ್ಲಿ ಕರ್ನಾಟಕ ಸಾರಿಗೆಯ ಚಿತ್ರಣವೇ ಬದಲಾಗಲಿದೆ : ಸಿಎಂ

ಹುಬ್ಬಳ್ಳಿ,ಫೆ.28- ಇಂದು ರಾಜ್ಯದಲ್ಲಿ ಚಾಲನೆ ಸಿಗಲಿರುವ ಮಹತ್ವಾಕಾಂಕ್ಷಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಂದ ಮುಂದಿನ ದಿನಗಳಲ್ಲಿ ಕರ್ನಾಟಕದ ಸಾರಿಗೆ ಚಿತ್ರಣವೇ ಬದಲಾಗಲಿದೆ ಎಂದು ಮುಖ್ಯಾಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿಪರವಾದ ಯೋಜನೆಗಳಿಂದ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಭದ್ರ ಬುನಾದಿಯಾಗಲಿದೆ ಎಂದರು. ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿಯವರು ಹಲವಾರು ಯೋಜನೆಗಳಿಗೆ ಚಾಲನೆ ಹಾಗೂ ಲೋಕಾರ್ಪಣೆ […]