ಹಾಲು, ನೀರು, ವಿದ್ಯುತ್ ದರ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಸಿಎಂ

ಬೆಂಗಳೂರು, ಜ.22- ಜೀವನಾವಶ್ಯಕವಾದ ಹಾಲು, ನೀರು ಹಾಗೂ ವಿದ್ಯುತ್ ದರವನ್ನು ಹೆಚ್ಚಳ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಯಾವುದೇ ಕಾರಣಕ್ಕೂ ಅವಸರದ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನತೆಗೆ ಶುಭ ಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ಹಾಲಿ ದರವನ್ನು ಪ್ರತಿ ಲೀಟರ್‍ಗೆ 3ರೂ., ವಿದ್ಯುತ್ ದರವನ್ನು ಯೂನಿಟ್‍ಗೆ 2 ರೂ. ಹಾಗೂ ನೀರಿನ ದರವನ್ನು ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದಕ್ಕೆ ತೆರೆ ಎಳೆದಿರುವ ಸಿಎಂ, ದರ ಏರಿಕೆಗಳ ಬಗ್ಗೆ […]