ಶುಕ್ರವಾರದ ಸೀಕ್ರೆಟ್ ಬಿಟ್ಟುಕೊಡದ ಸಿಎಂ, ಜನಪರ ತೀರ್ಮಾನದ ಸೂಚನೆ

ಬೆಂಗಳೂರು,ಜ.19- ಶುಕ್ರವಾರ ನಡೆಯಲಿರುವ ಸಭೆಯಲ್ಲಿ ತಜ್ಞರು ನೀಡಿರುವ ಶಿಫಾರಸ್ಸುಗಳ ಬಗ್ಗೆ ಪರಾಮರ್ಶೆ ನಡೆಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಸರ್ಕಾರಕ್ಕೆ ಹಲವು ಸಲಹೆಗಳನ್ನು ನೀಡಿದ್ದಾರೆ. ಈ ಎಲ್ಲ ಸಾಧಕಬಾಧಕಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂತಿಮವಾಗಿ ಜನಪರವಾದ ತೀರ್ಮಾನವನ್ನು ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.ಬೇರೆ ಬೇರೆ ರಾಜ್ಯಗಳಲ್ಲಿ ಬರುತ್ತಿರುವ ಕೋವಿಡ್ ಸ್ಥಿತಿಗತಿ ಕುರಿತು ಸರ್ಕಾರಕ್ಕೆ ತಜ್ಞರು ತಮ್ಮದೇ ಆದ ಸಲಹೆಗಳನ್ನು […]