ಬೆಂಗಳೂರಲ್ಲಿ ಗುಂಡಿ ಗಂಡಾಂತರ : ಬಿಬಿಎಂಪಿಗೆ ಸಿಎಂ ತರಾಟೆ

ಬೆಂಗಳೂರು, ನ.5- ನಗರದಲ್ಲಿ ದಿನೇ ದಿನೇ ಗುಂಡಿಗಳಿಂದ ಅಪಘಾತಗಳು ಹೆಚ್ಚುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ಸಿಂಗ್ ಅವರು ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಡಕ್ ಸೂಚನೆ ನೀಡಿದ್ದಾರೆ. ಪ್ರತಿದಿನ ನಗರದಲ್ಲಿ ರಸ್ತೆ ಗುಂಡಿಗಳಿಂದ ಒಂದಲ್ಲ ಒಂದು ಅವಾಂತರಗಳು ಸಂಭವಿಸುತ್ತಲೇ ಇವೆ. ಇದರಿಂದ ಸಾರ್ವಜನಿಕರು ಸರ್ಕಾರ ಹಾಗೂ ಪಾಲಿಕೆ ವಿರುದ್ಧ ಹಿಡಿಶಾಪ ಹಾಕುತ್ತಲೇ ಇದ್ದಾರೆ. ನ್ಯಾಯಾಲಯ ಕೂಡ ಗುಂಡಿಗಳನ್ನು ಮುಚ್ಚುವಂತೆ ಆದೇಶದ ಮೇಲೆ ಆದೇಶ ನೀಡುತ್ತಲೇ ಇದೆ. […]