ನಾಳೆ ಸಿಎಂ ದೆಹಲಿಗೆ ತೆರಳುವ ಸಾಧ್ಯತೆ, ಕೆಲವು ಸಚಿವರಿಗೆ ಶುರುವಾಯ್ತು ಢವಢವ..!

ಬೆಂಗಳೂರು,ಫೆ.2-ಸಂಪುಟ ವಿಸ್ತರಣೆಗೆ ಶಾಸಕರಿಂದ ನಿರಂತರ ಒತ್ತಡಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವರಿಷ್ಠರ ಜೊತೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ದೆಹಲಿಗೆ ತೆರಳುವ ಸಾಧ್ಯತೆ ಇದೆ.ಎರಡು ದಿನಗಳ ಕಾಲ ದೆಹಲಿಯಲ್ಲೆ ವಾಸ್ತವ್ಯ ಹೂಡಲಿರುವ ಸಿಎಂ ಪ್ರಧಾನಿ ನರೇಂದ್ರಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಷಾ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಪ್ರಮುಖರನ್ನು ಭೇಟಿಯಾಗಲಿದ್ದಾರೆ.ಸಚಿವ ಸಂಪುಟ ಪುನಾರಚನೆ/ವಿಸ್ತರಣೆ, ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಾತಿ, ಕಳೆದ ಆರು ತಿಂಗಳ […]