ಅರಸು ಹೆಸರಲ್ಲಿ ಜಿಲ್ಲಾ ಮಟ್ಟದಲ್ಲೂ ಪ್ರಶಸ್ತಿ : ಸಿಎಂ ಘೋಷಣೆ

ಬೆಂಗಳೂರು,ಆ.20- ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರತಿ ವರ್ಷ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಹೆಸರಿನಲ್ಲಿ ನೀಡಲಾಗುತ್ತಿದ್ದ ರಾಜ್ಯಮಟ್ಟದ ಪ್ರಶಸ್ತಿಯನ್ನು ಇನ್ನು ಮುಂದೆ ಜಿಲ್ಲಾ ಮಟ್ಟದಲ್ಲೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈವರೆಗೂ ದೇವರಾಜ ಅರಸು ಹೆಸರಿನಲ್ಲಿ ಪ್ರತಿ ವರ್ಷ ಅವರ ಹುಟ್ಟುಹಬ್ಬದ ವೇಳೆ ಸಾಧಕರನ್ನು […]

ಸಮೃದ್ಧ ಕರ್ನಾಟಕ ನಿರ್ಮಾಣದತ್ತ ಹೆಜ್ಜೆ : ಸಿಎಂ ಬೊಮ್ಮಾಯಿ ಸ್ವಾತಂತ್ರ್ಯೋತ್ಸವ ಭಾಷಣ

ಬೆಂಗಳೂರು,ಆ.15- ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಸಮೃದ್ಧ ಕರ್ನಾಟಕ ನಿರ್ಮಾಣದತ್ತ ಹೆಜ್ಜೆ ಇಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದ ಜನತೆಗೆ ವಿವಿಧ ಅಮೃತ ಯೋಜನೆಗಳನ್ನು ಘೋಷಿಸಿ, ನವಭಾರತಕ್ಕಾಗಿ ನವಕರ್ನಾಟಕ ನಿರ್ಮಾಣ ಮಾಡುವ ಶಪಥ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯಲ್ಲಿ ಕರ್ನಾಟಕದಿಂದಲೇ ಕನಿಷ್ಠ ಒಂದು ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಸಂಕಲ್ಪ ನಮ್ಮದು ಎಂದಿರುವ ಅವರು, ಈ ಮಹತ್ವಾಕಾಂಕ್ಷೆಯ ಗುರಿ ಸಾಧನೆಗೆ ಸರ್ಕಾರ ಎಲ್ಲ ರೀತಿಯ […]

ಎಸಿಬಿ ರದ್ದು, ಎಜೆ ವರದಿ ನಂತರ ಕ್ರಮ

ಬೆಂಗಳೂರು, ಆ.12- ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯನ್ನು ರದ್ದುಪಡಿಸಿ ಲೋಕಾಯುಕ್ತಕ್ಕೆ ಶಕ್ತಿ ತುಂಬುವ ವಿಚಾರವಾಗಿ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ಕಾನೂನು ಇಲಾಖೆ, ಅಡ್ವೊಕೇಟ್ ಜನರಲ್ ಅವರು ಅಧ್ಯಯನ ಮಾಡಿ ನೀಡುವ ವರದಿ ಆಧರಿಸಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದರು. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ, ರಾಜ್ಯ ಭಾಷಾ ಆಯೋಗ ಹಾಗೂ ಭಾಷಾಂತರನಿರ್ದೇಶನಾಲಯದ ವತಿಯಿಂದ ಭಾರತ ದಂಡ ಸಂಹಿತೆ (ಐಪಿಸಿ), ದಂಡ ಪ್ರಕ್ರಿಯಾ ಸಂಹಿತೆ (ಸಿಸಿಪಿ) […]

ನೆರೆಯಿಂದ ಸಂಕಷ್ಟಕ್ಕೀಡಾದವರಿಗೆ ಶೀಘ್ರವೇ ಪರಿಹಾರ : ಸಿಎಂ ಭರವಸೆ

ಹುಬ್ಬಳ್ಳಿ,ಜು.16-ಭಾರೀ ಮಳೆ ಮತ್ತು ಪ್ರವಾಹದಿಂದ ಸಂಕಷ್ಟಕ್ಕೆ ಈಡಾದ ಜನರಿಗೆ ಪರಿಹಾರ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಹಾವಳಿ ಪ್ರದೇಶಗಳಿಗೆ ಈಗಾಗಲೇ ತೆರಳಿ ಪರಿಹಾರ ನೀಡಲು ವೀಕ್ಷಣೆ ಮಾಡಿದ್ದು ಪರಿಹಾರ ಸಹ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮೂಲ ಸೌಕರ್ಯಕ್ಕಾಗಿ 500 ಕೋಟಿ ಒದಗಿಸಿದ್ದೇನೆ. ಮನೆಗಳನ್ನು ಕಟ್ಟಲು ಪರಿಹಾರ ಮೊತ್ತವನ್ನು ಹೆಚ್ಚಳ ಮಾಡಿದ್ದೇವೆ. ಕೇಂದ್ರ ಸರ್ಕಾರದ ಬೆಳೆ […]