ಅಧಿವೇಶನದಲ್ಲಿ ಯಾವುದೇ ವಿಚಾರಗಳ ಚರ್ಚೆಗೆ ನಿರ್ಬಂಧವಿಲ್ಲ : ಸಿಎಂ

ಬೆಂಗಳೂರು,ಮಾ.9-ಅಧಿವೇಶನದಲ್ಲಿ ಯಾವುದೇ ವಿಚಾರಗಳ ಚರ್ಚೆಗೆ ನಿರ್ಬಂಧವಿಲ್ಲ. ಬಜೆಟ್ ಮೇಲೆ ಸಮಗ್ರ ಚರ್ಚೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು. 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡುತ್ತಿದ್ದಾಗ ಕಾಂಗ್ರೆಸ್-ಜೆಡಿಎಸ್ ಸದಸ್ಯರ ನಡುವೆ ಏರಿದ ದನಿಯಲ್ಲಿ ವಾಗ್ವಾದ ನಡೆಯುತ್ತಿದ್ದಾಗ ಮಧ್ಯಪ್ರವೇಶಿಸಿ ಮುಖ್ಯಮಂತ್ರಿ ಮಾತನಾಡಿದರು. ಆಯವ್ಯಯ ಎಂಬುದು ಒಂದು ಪ್ರಮುಖ ದಾಖಲೆ. ಯಾವ ವರ್ಗಕ್ಕೆ ಯಾವ ಬಾಬ್ತಿಗೆ ಖರ್ಚು ಮಾಡಲಾಗುತ್ತದೆ ಎಂಬ ಚರ್ಚೆಯಾಗಲಿ ಒಂದು ತಿಂಗಳ ಕಾಲ […]