ಇಂದು ಸಂಜೆ ಸಿಎಂ ಮಹತ್ವದ ಸಭೆ, ಲಾಕ್ ಆಗುತ್ತಾ ಕರ್ನಾಟಕ..?

ಬೆಂಗಳೂರು,ಜ.17-ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೊಳಿಸಿದ್ದರೂ ಕೋವಿಡ್ ಸ್ಫೋಟ ಮುಂದುವರೆದಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ಮಹತ್ವದ ಸಭೆ ಕರೆದಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ, ಕಂದಾಯ ಸಚಿವ ಆರ್.ಅಶೋಕ್ ಮತ್ತು ಕೊವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಹಿನ್ನೆಲೆಯಲ್ಲಿ ಜಾರಿಗೊಳಿಸಿರುವ ನಿರ್ಬಂಧಗಳು ಜ.19ಕ್ಕೆ ಅಂತ್ಯವಾಗಲಿವೆ. ಕೋವಿಡ್ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಅಧಿಕಾರಿಗಳು ಮತ್ತು ಸಚಿವರು ಮಾಹಿತಿ ನೀಡಲಿದ್ದಾರೆ. […]