ವೋಟರ್ ಲಿಸ್ಟ್ ಅಕ್ರಮ ಆರೋಪ : ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ

ಬೆಂಗಳೂರು, ನ.17- ಮತದಾರರ ಡೇಟಾವನ್ನು ಕಾನೂನು ಬಾಹಿರವಾಗಿ ಸಂಗ್ರಹ ಮಾಡಲಾಗಿದೆ ಎಂಬ ಪ್ರತಿಪಕ್ಷ ಕಾಂಗ್ರೆಸ್ ಆರೋಪ ಕುರಿತಾಗಿ ಸಮಗ್ರವಾಗಿ ತನಿಖೆಗೆ ಸೂಚನೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿದಂತೆ ಮತ್ತಿತರ ಸರ್ಕಾರ ಮತ್ತು ನನ್ನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿದ್ದಾರೆ. ಈ ಕುರಿತು ನಾನು ಸಮಗ್ರ ತನಿಖೆ ನಡೆಸಲು ಸಂಬಂಧ ಪಟ್ಟ […]