ಸಿಎಂ ಕುರ್ಚಿಗಾಗಿ ಹಾದಿಬೀದಿಯಲ್ಲಿ ಕಿತ್ತಾಡಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕರು : ಬಿಎಸ್‍ವೈ ವ್ಯಂಗ್ಯ

ಬೆಂಗಳೂರು,ಜು.21- ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಬರಲು ಬಿಡುವುದಿಲ್ಲ. ಯಾರು ಏನೇ ಹೇಳಿದರೂ 2023 ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರು ಎಂಬಂತೆ ಕಾಂಗ್ರೆಸ್‍ನಲ್ಲಿ ಆಗಲೇ ಮುಖ್ಯಮಂತ್ರಿ ಕುರ್ಚಿಗೆ ಹಾದಿಬೀದಿಯಲ್ಲಿ ಬಡೆದಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಕ್ಕೆ ಬಂದರೆ ತಾನೆ ಮುಖ್ಯಮಂತ್ರಿಯಾಗುವುದು ಎಂದು ವ್ಯಂಗ್ಯವಾಡಿದರು. ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ […]