ಕಾನೂನು ಉಲ್ಲಂಘಿಸಿದವರು ಎಷ್ಟೇ ದೊಡ್ಡವರಾಗಿದ್ದರೂ ಕಾನೂನಿನಡಿಯೇ ಕ್ರಮ ಕೈಗೊಳ್ಳುತ್ತೇವೆ : ಸಿಎಂ

ಬೆಂಗಳೂರು,ಜ.10- ಕಾನೂನು ಉಲ್ಲಂಘಿಸಿದವರು ಎಷ್ಟೇ ದೊಡ್ಡವರಿದ್ದರೂ ಅವರ ಮೇಲೆ ಕಾನೂನಿನ ಪ್ರಕಾರವೇ ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲನೆ ಮಾಡಲೇಬೇಕು. ದೊಡ್ಡವರಿಗೊಂದು, ಜನಸಾಮಾನ್ಯರಿಗೊಂದು ನಿಯಮ ಮಾಡಿಲ್ಲ. ಉಲ್ಲಂಘನೆ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ಮೇಲೆ ನಿಶ್ಚಿತವಾಗಿಯೂ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. […]