ಡಿ.ಕೆ.ಶಿವಕುಮಾರ್ ರಾಜಕೀಯ ನಾಟಕಗಳಿಗೆ ಜನ ಸೊಪ್ಪು ಹಾಕಲ್ಲ : ಸಿಎಂ

ಬೆಂಗಳೂರು,ಜ.9- ಐದು ವರ್ಷ ಆಡಳಿತದಲ್ಲಿದ್ದಾಗ ಯಾವುದೇ ನೀರಾವರಿ ಯೋಜನೆ ಮಾಡದೆ ಈಗ ಬೆಟ್ಟ ಅಗೆದು ಇಲಿ ಹಿಡಿಯಲು ಹೊರಟಿದ್ದಾರೆ ಎಂದು ಕಾಂಗ್ರೆಸ್‍ನ ಪಾದಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ವರ್ಷ ನಿಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಒಂದೇ ಒಂದು ವಿಸ್ತೃತ ಯೋಜನಾ ವರದಿ(ಡಿಪಿಆರ್) ಮಾಡಲು ಸಾಧ್ಯವಾಗಲಿಲ್ಲ. ನಾವು ಅಧಿಕಾರದಲ್ಲಿದ್ದಾಗ ಏನೂ ಮಾಡಲಿಲ್ಲ ಎಂಬ ಅಪರಾಧ ಮನೋಭಾವನೆ ಅವರಿಗೆ ಕಾಡುತ್ತಿದೆ. ಹೀಗಾಗಿಯೇ ಪಾದಯಾತ್ರೆ ಹೊರಟಿದ್ದಾರೆ ಎಂದು ಕುಹುಕವಾಡಿದರು. ಸಮ್ಮಿಶ್ರ ಸರ್ಕಾರವಿದ್ದಾಗ ಒಂದು ಡಿಪಿಆರ್ ಕಳುಹಿಸಿದ್ದನ್ನು […]