ಅಂತರ್ ನಗರ ಸೇವೆಗೆ 25 ಎಲೆಕ್ಟ್ರಿಕ್ ಬಸ್ ಸೇರ್ಪಡೆ

ಬೆಂಗಳೂರು, ಮಾ. 21- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಂತರ್ ನಗರ ಎಲೆಕ್ಟ್ರಿಕ್ ಬಸ್ ಸೇವೆಗೆ ಇನ್ನೂ 25 ಒಲೆಕ್ಟ್ರಾ ಬಸ್‍ಗಳು ಸೇರ್ಪಡೆಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮುಂಭಾಗ ಪವರ್ ಪ್ಲಸ್ ಬಸ್‍ಗಳ ಸೇವೆಗೆ ಚಾಲನೆ ನೀಡಿದರು. ಬೆಂಗಳೂರು, ಮೈಸೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ವಿರಾಜಪೇಟೆ ಮತ್ತು ಮಡಿಕೇರಿಯ ಮಾರ್ಗಗಳಲ್ಲಿ ಇ-ಬಸ್ಸುಗಳು ಸಂಚರಿಸಲಿವೆ. 12 ಮೀಟರ್ ಉದ್ದದ ಸಂಪೂರ್ಣ ಹವಾನಿಯಂತ್ರಿತ ಟೈಪ್-3 ಇಂಟರ್ ಸಿಟಿ ಇ-ಬಸ್ ಗಳು ಒಂದು ಚಾರ್ಜ್ನ್‍ಲ್ಲಿ 300 ಕಿ.ಮೀ. […]

ಮಾ.23 ರಂದು ‘ವಿವೇಕಾನಂದ ಯುವಶಕ್ತಿ ಸಂಘ’ ಯೋಜನೆಗೆ ಚಾಲನೆ

ಬೆಂಗಳೂರು, ಮಾ.19- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ ಯೋಜನೆಗೆ ಮಾ.23 ರಂದು ಚಾಲನೆ ನೀಡಲಿದ್ದಾರೆ. ಈ ಕುರಿತು ಇಂದು ಮುಖ್ಯಮಂತ್ರಿಯವರು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಘಗಳ ರಚನೆಯ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು ಬಹಳ ವರ್ಷಗಳಿಂದ ಸಕ್ರಿಯವಾಗಿವೆ. ಆದರೆ ಯುವಕರಿಗಾಗಿ ಮೊದಲ ಬಾರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಇಂತಹ ಯೋಜನೆಯನ್ನು ರೂಪಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು […]

ನೀರಿನ ಸೋರಿಕೆ ತಡೆಗಟ್ಟಲು ಜಾಗೃತದಳ ರಚನೆ : ಸಿಎಂ ಬೊಮ್ಮಾಯಿ

ಬೆಂಗಳೂರು,ಫೆ.16- ನಗರದಲ್ಲಿ ನೀರಿನ ಕಳ್ಳತನ, ಅಕ್ರಮ ಸಂಪರ್ಕ ಮತ್ತು ಸೋರಿಕೆಯನ್ನು ಕಟ್ಟುನಿಟ್ಟಾಗಿ ತಡೆ ಗಟ್ಟಲು ಜಾ ಗೃತ ದಳ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ವಿಧಾನ ಪರಿಷತ್ನ ಪ್ರಶ್ನೋತ್ತರ ಅವಯಲ್ಲಿ ಸದಸ್ಯೆ ಭಾರತಿ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಬೆಂಗಳೂರು ಜಲಮಂಡಳಿ ಕಾವೇರಿ ಒಂದರಿಂದ ನಾಲ್ಕನೇ ಹಂತದವರೆಗೆ 1450 ದಶಲಕ್ಷ ಲೀಟರ್ ಪೂರೈಕೆ ಮಾಡುತ್ತಿದೆ. ಕಾವೇರಿ ನೀರಿನ ಸಂಗ್ರಹಣೆ,ಸರಬರಾಜಿಗೆ ಮುನ್ನ ಜಲ ಶುದ್ಧೀಕರಣ ಘಟಕದಲ್ಲಿ ರಾಸಾಯನಿಕ ಬಳಕೆ, ವಿದ್ಯುತ್ ಶುಲ್ಕ, ಬಂಡವಾಳ ವೆಚ್ಚ ಹಾಗೂ ನೌಕರರ […]

ತೆಲಂಗಾಣದಲ್ಲಿ ಕರ್ನಾಟಕದ ವಿರುದ್ಧ ಆಕ್ಷೇಪಾರ್ಹ ಫಲಕ: ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು,ಸೆ.18- ಶೇಕಡಾ 40% ಸರ್ಕಾರಕ್ಕೆ ಸುಸ್ವಾಗತ ಎಂದು ಹೈದರಾಬಾದ್‍ನಲ್ಲಿ ಹಾಕಿದ್ದ ಆಕ್ಷೇಪಾರ್ಹ ಫಲಕಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿ ಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ಘಟನೆಗಳಿಂದ ಎರಡೂ ರಾಜ್ಯಗಳ ನಡುವೆ ಸಂಬಂಧ ಹದಗೆಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ತೆಲಂಗಾಣದ ಭ್ರಷ್ಟಾಚಾರವನ್ನು ಕರ್ನಾಟಕದಲ್ಲಿ ಪ್ರಸ್ತಾಪಿಸಿದರೆ ಹೇಗಿರುತ್ತದೆ ಎಂದು ಅವರು ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಅವರಿಗೂ ಎಚ್ಚರಿಕೆ ಕೊಟ್ಟರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ವ್ಯವಸ್ಥಿತ ಷಡ್ಯಂತ್ರ. ಇಂಥ ಬೆಳವಣಿಗೆಗಳಿಂದ ಕರ್ನಾಟಕ ಮತ್ತು ತೆಲಂಗಾಣ ನಡುವೆ ರಾಜಕೀಯ ಸಂಬಂಧಗಳು […]

ಗ್ರಾಮೀಣ ಕ್ರೀಡೆಗಳಿಗೆ ಸರ್ಕಾರದಿಂದ ಎಲ್ಲ ರೀತಿಯ ಸಹಕಾರ : ಸಿಎಂ

ಬೆಂಗಳೂರು,ಆ.29- ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಆರ್ಥಿಕ ನೆರವು ಸೇರಿದಂತೆ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸೌಧಧ ಬಾಂಕ್ವೆಟ್ ಹಾಲ್‍ನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಥಾನ್‍ಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವುದು ಎಲ್ಲ ಸರ್ಕಾರಗಳ ಆದ್ಯಕರ್ತವ್ಯ. ಈ ಹಂತದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಸಿಕ್ಕರೆ ಅಂತಾರಾಷ್ಟ್ರೀಯ […]