ವಿಪಕ್ಷ ಸ್ಥಾನದಲ್ಲಿ ಕೂರುವ ಅರ್ಹತೆ-ನೈತಿಕತೆಯನ್ನು ಕಾಂಗ್ರೆಸ್ ಕಳೆದುಕೊಂಡಿದೆ : ಸಿಎಂ

ಬೆಂಗಳೂರು, ಫೆ.22- ಕಾಂಗ್ರೆಸ್ ವಿರೋಧ ಪಕ್ಷದಲ್ಲೂ ಕುಳಿತುಕೊಳ್ಳುವ ಅರ್ಹತೆ ಮತ್ತು ನೈತಿಕತೆಯನ್ನು ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.ರಾಜ್ಯಪಾಲರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದ ಮೇಲಿನ ಚರ್ಚೆಗೆ ವಿಧಾನ ಪರಿಷತ್ ನಲ್ಲಿ ಬೋಜನ ವಿರಾಮದ ಬಳಿಕ ಸರ್ಕಾರದ ಪರವಾಗಿ ಉತ್ತರ ನೀಡಿದ ಮುಖ್ಯಮಂತ್ರಿಯವರು, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ವಿಪಕ್ಷ ತೊಡಗಿಸಿಕೊಳ್ಳದೆ ಉತ್ತರ ನೀಡಬೇಕಾದ ಪರಿಸ್ಥಿತಿ ಇತಿಹಾಸದಲ್ಲಿ ಇದೇ ಮೊದಲು, ವಿರೋಧ ಪಕ್ಷ ಸರ್ಕಾರದ ನ್ಯೂನತೆಗಳನ್ನು ಎತ್ತಿ ತೋರಿಸುವ ಅವಕಾಶವನ್ನು ಕಳೆದುಕೊಂಡಿದೆ […]