ಆಯವ್ಯಯದಲ್ಲಿ ಕ್ಷತ್ರಿಯ ಸಮುದಾಯಕ್ಕೂ ಆರ್ಥಿಕ ನೆರವು ಘೋಷಣೆ : ಸಿಎಂ

ಬೆಂಗಳೂರು, ಜ.29- ಮುಂದಿನ ಆರ್ಥಿಕ ಸಾಲಿನ ಆಯವ್ಯಯದಲ್ಲಿ ಕ್ಷತ್ರಿಯ ಸಮುದಾಯಕ್ಕೂ ಆರ್ಥಿಕ ನೆರವು ಘೋಷಣೆ ಮಾಡಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಕರ್ನಾಟಕ ಕ್ಷತ್ರಿಯ ಒಕ್ಕೂಟಗಳ ವತಿಯಿಂದ ಅರಮನೆ ಮೈದಾನದಲ್ಲಿಂದು ಆಯೋಜಿಸಿದ್ದ ಬೃಹತ್ ಕ್ಷತ್ರಿಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯ ಭವನಗಳ ನಿರ್ಮಾಣಕ್ಕೆ ಕ್ರಮ ಕ್ರಮ ಕೈಗೊಳ್ಳಲಾಗುವುದು. ಕ್ಷತ್ರಿಯ ಸಮುದಾಯದ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ. ಕ್ಷತ್ರಿಯ ಸಮುದಾಯದ ವಿವಿಧ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸುವುದಾಗಿ ಭರವಸೆ ನೀಡಿದರು. ದೇಶದ ಹಲವೆಡೆ ವಿವಾದಾತ್ಮಕ ಬಿಬಿಸಿ […]

ಮಹಾರಾಷ್ಟ್ರ ಸಚಿವರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು,ಡಿ.5- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿ ವಿವಾದ ತೀವ್ರ ಸಂಘರ್ಷ ಉಂಟು ಮಾಡುತ್ತಿರುವ ಹಿನ್ನಲೆಯಲ್ಲಿ ನಾಳೆ ಅಲ್ಲಿನ ಸಚಿವರ ಭೇಟಿಗೆ ಪ್ರತಿಬಂಧಕಾಜ್ಞೆ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನಾಳೆ ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್ ಪಾಟೀಲ್, ಶಂಭುರಾಜ್ ದೇಸಾಯಿ ಅವರು ಬೆಳಗಾವಿಗೆ ಭೇಟಿ ಕೊಟ್ಟು ಎಂಇಎಸ್ ನಾಯಕರ ಜೊತೆ ಗಡಿವಿವಾದ ಕುರಿತು ಚರ್ಚೆ ನಡೆಸಲಿದ್ದಾರೆ. ಆದರೆ ಸಚಿವರ ಆಗಮನಕ್ಕೆ ಕನ್ನಡಪರ ಸಂಘಟನೆಗಳು ಹಾಗೂ ಸಾಹಿತಿಗಳು ಸೇರಿದಂತೆ ವಿವಿಧ ವಲಯಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿರುವ ಕಾರಣ, ಭೇಟಿಗೆ ಅವಕಾಶ […]

ಕಬ್ಬಿಣ, ಅದಿರು ಉತ್ಪಾದನೆಯಲ್ಲಿ ರಾಜ್ಯ ನಂ.1 : ಸಿಎಂ

ಬೆಂಗಳೂರು,ಡಿ.3- ಕರ್ನಾಟಕ ಶೀಘ್ರದಲ್ಲೇ ಕಬ್ಬಿಣ ಮತ್ತು ಅದಿರು ಉತ್ಪಾದನೆಯಲ್ಲಿ ದೇಶದಲ್ಲೇ ಮೊದಲ ಸ್ಥಾನಕ್ಕೆ ಬರುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಗಣಿ ಉದ್ಯಮದಲ್ಲಿ ಅವಕಾಶಗಳ ಕುರಿತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಬಳ್ಳಾರಿಯ ಅದಿರು ಮತ್ತು ಕಬ್ಬಿಣ ದೇಶದಲ್ಲೇ ಅತ್ಯುತ್ತಮವಾದ ನೈಸರ್ಗಿಕ ಸಂಪನ್ಮೂಲ ಎಂದು ಬಿಂಬಿತವಾಗಿದೆ. ಹೀಗಾಗಿ ಈ ಉತ್ಪಾದನೆಯಲ್ಲಿ ನಾವು ಮೊದಲ ಸ್ಥಾನಕ್ಕೆ ಬರುವ ಸಾಧ್ಯತೆ ಇದೆ ಎಂದು ಹೇಳಿದರು.ಗಣಿಗಾರಿಕೆ ಮತ್ತು ಅದಿರು […]

ರಾಷ್ಟ್ರಪತಿಗಳ ಔತಣಕೂಟಕ್ಕೆ ತೆರಳಿದ ಸಿಎಂ ಬೊಮ್ಮಾಯಿ

ಬೆಂಗಳೂರು,ಜು.22- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಗೆ ತೆರಳಲಿದ್ದು, ರಾಷ್ಟ್ರಪತಿಗಳ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ನರೇಂದ್ರಮೋದಿ ಅವರು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಬಿಜೆಪಿ ಹಾಗೂ ಎನ್‍ಡಿಎ ಮೈತ್ರಿಕೂಟದ ಮುಖ್ಯಮಂತ್ರಿಗಳನ್ನು ಆಹ್ವಾನಿಸಿರುವುದರಿಂದ ಬೊಮ್ಮಾಯಿ ಅವರು ತೆರಳುತ್ತಿದ್ದಾರೆ. ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ಭಾನುವಾರ ಸಂಜೆ ಪುನಃ ನವದೆಹಲಿಗೆ ತೆರಳುವರು. ಸೋಮವಾರ ಸಂಸತ್‍ನ ದರ್ಬಾರ್ ಹಾಲ್‍ನಲ್ಲಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲೂ ಅವರು […]