ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕ

ಬೆಂಗಳೂರು,ಫೆ.4- ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯನ್ನಾಗಿ ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕೇಂದ್ರ ಬಿಜೆಪಿ ವರಿಷ್ಠರು ನೇಮಿಸಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಅವರಿಗೆ ಸಹ ಉಸ್ತುವಾರಿಯಾಗಿ ನೇಮಿಸಲಾಗಿದೆ. ಈ ಹಿಂದೆ ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚುನಾವಣಾ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ್ದ ಧರ್ಮೇಂದ್ರ ಪ್ರಧಾನ್ ಬಿಜೆಪಿಯ ಚಿಂತಕರ ಛಾವಡಿಯಲ್ಲಿ ಪ್ರಮುಖರಾಗಿದ್ದಾರೆ. ಕರ್ನಾಟಕದಲ್ಲಿ ಹಿಂದೆಯೂ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ ಅನುಭವವಿದ್ದ ಹಿನ್ನಲೆಯಲ್ಲಿ ಬಿಜೆಪಿ […]