ಕಲ್ಲಿದ್ದಲು ಗಣಿ ಹೂಡಿಕೆಗೆ ನಾಳೆ ಬೆಂಗಳೂರಿನಲ್ಲಿ ಸಮಾವೇಶ

ನವದೆಹಲಿ,ಡಿ.2- ಕಲ್ಲಿದ್ದಲು ಗಣಿಗಳ ವಾಣಿಜ್ಯ ಹರಾಜಿನಲ್ಲಿ ಭಾಗವಹಿಸುವಿಕೆಯನ್ನು ಮತ್ತಷ್ಟು ಹೆಚ್ಚಿಸಲು, ಕೇಂದ್ರ ಕಲ್ಲಿದ್ದಲು ಸಚಿವಾಲಯವು ನಾಳೆ ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶ ಆಯೋಜಿದೆ. ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಕಲ್ಲಿದ್ದಲು ಸಚಿವಾಲಯವು ಭಾರತದಾದ್ಯಂತ ಹಲವಾರು ಸ್ಥಳಗಳಲ್ಲಿ ಹೂಡಿಕೆದಾರರ ಸಮಾವೇಶವನ್ನು ನಡೆಸಲು ಯೋಜಿಸಿದೆ ಮತ್ತು ಈಗಾಗಲೇ ಇಂದೋರ್ ಮತ್ತು ಮುಂಬೈ ನಗರಗಳಲ್ಲಿ ಅಂತಹ ಸಮಾವೇಶಗಳನ್ನು ಯಶಸ್ವಿಯಾಗಿ ನಡೆದಿವೆ. […]