ಕೋಲ್ಡ್ ಸ್ಟೋರೇಜ್ ಕುಸಿದು 14 ಮಂದಿ ಸಾವಿನ ಪ್ರಕರಣ, ಇಬ್ಬರು ಮಾಲೀಕರ ಬಂಧನ

ಸಂಭಾಲ್,ಮಾ.18- ಅಕ್ರಮವಾಗಿ ನಿರ್ಮಿಸಲಾಗಿದ್ದ ಕೋಲ್ಡ್ ಸ್ಟೋರೇಜ್ ಕುಸಿತು 14 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಚಂಡೌಸಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ರಸ್ತೆಯಲ್ಲಿದ್ದ ಕೋಲ್ಡ್‍ಸ್ಟೋರೆಜ್ ಗುರುವಾರ ಕುಸಿದಿತ್ತು, ಅದರಡಿ ಸಿಲುಕಿದ್ದ 24 ಜನರನ್ನು ಹೊರತೆಗೆಯಲಾಗಿದೆ. ಅವರಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಕೋಲ್ಡ್ ಸ್ಟೋರೇಜ್ ಮಾಲೀಕರಾದ ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ಅವರನ್ನು ಉತ್ತರಾಖಾಂಡದ ಹಲ್ದ್ವಾನಿಯಿಂದ ಬಂಧಿಸಲಾಗಿದೆ ಎಂದು ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ಬನ್ಸಾಲ್ ತಿಳಿಸಿದ್ದಾರೆ. ಸಂಕಷ್ಟದಲ್ಲಿರುವ ಶ್ರೀಲಂಕಾ ನೆರವಿಗೆ […]
ಅಲೂಗಡ್ಡೆ ಕೋಲ್ಡ್ ಸ್ಟೋರೇಜ್ ಮೇಲ್ಛಾವಣಿ ಕುಸಿದು 8 ಮಂದಿ ಸಾವು

ಲಕ್ನೋ,ಮಾ.17-ಅಲೂಗಡ್ಡೆ ಕೋಲ್ಡ್ ಸ್ಟೋರೇಜ್ ಮೇಲ್ಛಾವಣಿ ಕುಸಿದು ಬಿದ್ದು ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಸಂಬಾಲ್ ಚಂದೌಸಿ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಇತರ 11 ಮಂದಿಯ ಪ್ರಾಣ ರಕ್ಷಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ರಾಜ್ಯ ಪಡೆಗಳು ಯಶಸ್ವಿಯಾಗಿವೆ ಎಂದು ಮೊರಾದಾಬಾದ್ ಡಿಐಜಿ ಶಲಭ್ ಮಾಥುರ್ ತಿಳಿಸಿದ್ದಾರೆ. ಅವಶೇಷಗಳಡಿ ಇನ್ನಿತರ ಹಲವಾರು ಮಂದಿ ಸಿಲುಕಿರುವ ಸಾಧ್ಯತೆ ಇದ್ದು ರಕ್ಷಣಾ ಕಾರ್ಯ ಮುಂದುವರೆಸಲಾಗಿದೆ ಶೋಧ ಕಾರ್ಯಕ್ಕೆ ಸ್ನಿಫರ್ ಡಾಗ್‍ಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಅವರು […]
ಸಂಕಾಂತ್ರಿವರೆಗೂ ಮುಂದುವರೆಯಲಿದೆ ತೀವ್ರ ಚಳಿ

ಬೆಂಗಳೂರು, ಜ.9-ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಕನಿಷ್ಠ ತಾಪಮಾನ ಇಳಿಕೆಯಾಗುತ್ತಿರುವುದರಿಂದ ಚಳಿಯ ತೀವ್ರತೆ ಹೆಚ್ಚಾಗಲಿದೆ. ಮಕರ ಸಂಕ್ರಾಂತಿ ಹಬ್ಬದವರೆಗೂ ಚಳಿಯ ಪ್ರಮಾಣ ಹೆಚ್ಚಾಗಿರಲಿದೆ. ಹಗಲಿನಲ್ಲಿ ಸಾಕಷ್ಟು ಬಿಸಿಲು ಇದ್ದರೂ ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸುತ್ತಿದ್ದು, ಸಂಜೆ ಹಾಗೂ ರಾತ್ರಿ ಸಮಯದಲ್ಲಿ ಚಳಿ ಹೆಚ್ಚಾಗಲಿದೆ. ಮುಂಜಾನೆ ಬಹಳಷ್ಟು ಕಡೆಗಳಲ್ಲಿ ಮಂಜು ಕವಿದ ವಾತಾವರಣ ಸಹಜವಾಗಿದೆ. ಕೆಲವೆಡೆ ದಟ್ಟ ಮಂಜು ಕವಿಯಲಿದೆ. ಹಲವು ಕಡೆಗಳಲ್ಲಿ ಭಾಗಶಃ ಮೋಡ ಕವಿಯಲಿದೆ. ಹೀಗಾಗಿ ರಾಜ್ಯದಲ್ಲಿ ಕನಿಷ್ಠ ತಾಪಮಾನ ಸರಾಸರಿ […]