ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು..!

ಬೆಂಗಳೂರು,ಜ.10- ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ಗೆ ಅಳವಡಿಸಿದ್ದ ಕಬ್ಬಿಣದ ಸಲಾಕೆಗಳು ಏಕಾಏಕಿ ಚಲಿಸುತ್ತಿದ್ದ ಆ್ಯಕ್ಟಿವ್ ಹೋಂಡಾ ಸ್ಕೂಟರ್ ಮೇಲೆ ಉರುಳಿಬಿದ್ದ ಪರಿಣಾಮ ತಾಯಿ-ಮಗು ಸಾವಿಗೀಡಾಗಿರುವ ದಾರುಣ ಘಟನೆ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಹೆಣ್ಣೂರಿನಲ್ಲಿರುವ ಡಿಎಕ್ಸ್ ಮ್ಯಾಕ್ಸ್ ಅಪಾರ್ಟ್ಮೆಂಟ್ನ ನಿವಾಸಿ ತೇಜಸ್ವಿನಿ(28) ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟಿದ್ದಾರೆ. ಪತಿ ಲೋಹಿತ್ ಕುಮಾರ್ ಮತ್ತು ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂಲತಃ ಧಾರವಾಡ ಜಿಲ್ಲೆಯ […]
ಕಾಂಗ್ರೆಸ್ ಸಭೆಯಲ್ಲೇ ಹೃದಯಾಘಾತದಿಂದ ಮಾಜಿ ಶಾಸಕ ಶ್ರೀಶೈಲಪ್ಪ ಬಿದನೂರು ನಿಧನ

ಬೆಂಗಳೂರು, ನ.25- ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಸಲು ಕಾಂಗ್ರೆಸ್ಗೆ ಅರ್ಜಿ ಸಲ್ಲಿಸಿದ್ದ ಆಕಾಂಕ್ಷಿಗಳ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಗದಗದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರೋಣ ಮತ್ತು ಗದಗ ಕ್ಷೇತ್ರಗಳಿಂದ ಎರಡು ಬಾರಿ ಶ್ರೀಶೈಲಪ್ಪ ಶಾಸಕರಾಗಿ ಆಯ್ಕೆಯಾಗಿ ಕೆಲಸ ಮಾಡಿದ್ದರು. ಮೊದಲು ಬಿಜೆಪಿಯಲ್ಲಿದ್ದ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗದಗ ಕ್ಷೇತ್ರದಿಂದ ಸ್ರ್ಪಸಲು ಅರ್ಜಿ ಸಲ್ಲಿಸಿದ್ದರು. ಇಂದು ನಡೆದ ಆಕಾಂಕ್ಷಿಗಳ ಸಭೆಯಲ್ಲಿ ಭಾಗವಹಿಸಲು ಅವರು ಆಗಮಿಸಿದ್ದರು. ಆರಂಭದಲ್ಲೇ ವಾಂತಿಯಾಗಿದ್ದು […]
ಸೇತುವೆ ಕುಸಿದು ಕಾರ್ಮಿಕ ಸಾವು

ನಳಂದ,ನ.19- ನಿರ್ಮಾಣ ಹಂತದ ಸೇತುವೆ ಕುಸಿದು ಒಬ್ಬ ಕಾರ್ಮಿಕ ಮೃತಪಟ್ಟಿರುವ ಘಟನೆ ಬಿಹಾರದ ನಳಂದ ಜಿಲ್ಲಾಯಲ್ಲಿ ನಡೆದಿದೆ. ವೆನಾ ಪೊಲೀಸ್ ಠಾಣಾ ವ್ಯಾಪ್ತಿಯ ಭಾಗನ್ ಬಿಘಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು. ಮೃತನ ಕುಟುಂಬ ವರ್ಗಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡುವಂತೆ ಮತ್ತು ಗಾಯಗೊಂಡ ವ್ಯಕ್ತಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ನಿತೀಶ್ಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಸೇತುವೆಯ ಸಾಮಗ್ರಿಗಳನ್ನು […]
ಮೇಲ್ಛಾವಣಿ ಕುಸಿದು ಮಗು ಸೇರಿ ಮೂವರ ದುರ್ಮರಣ, ತಲಾ 4 ಲಕ್ಷ ಪರಿಹಾರ ಘೋಷಣೆ
ಲಖ್ನೋ,ಸೆ.19- ಎರಡಂತಸ್ತಿನ ಕಟ್ಟಡದ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ನಡೆದಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಎರಡು ವರ್ಷದ ಹೆಣ್ಣು ಮಗು ಸೇರಿದಂತೆ ದಿಲೀಪ್(35) ಮತ್ತು ಚಾಂದಿನಿ(30) ದಂಪತಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣೆ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದ ಮೃತ ದೇಹಗಳನ್ನು ಹೊರತೆಗೆದಿದ್ದಾರೆ ಎಂದು ಎಸ್ಎಂಡಿ ಸೌರಬ್ ಸಿಂಗ್ ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅಕ್ಕಪಕ್ಕದ ಮನೆಗಳನ್ನು ತೆರವು […]
ಭಾರೀ ಮಳೆಯಿಂದ ಸೇನಾ ಆವರಣದ ಗೋಡೆ ಕುಸಿದು 9 ಮಂದಿ ಸಾವು
ಲಕ್ನೋ, ಸೆ- ಭಾರೀ ಮಳೆಯಿಂದಾಗಿ ಸೇನಾ ಆವರಣದ ಗಡಿ ಗೋಡೆ ಕುಸಿದು ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಲಕ್ನೋ ಹೊರ ಪ್ರದೇಶದಲ್ಲಿ ನಡೆದಿದೆ. ದಿಲ್ಕುಶಾ ಬಳಿ ಭಾರತೀಯಸೇನಾ ಪಡೆಯ ಪ್ರದೇಶವಿದ್ದು ಸುತ್ತಲು ಭದ್ದತೆಗಾಗಿ ದೊಡ್ಡಗೋಡೆ ಕಟ್ಟಲಾಗಿದೆ. ಇತ್ತೀಚೆಗೆ ಕೆಲವು ಕಾರ್ಮಿಕರು ಗುಡಿಸಲು ಕಟ್ಟಿಕೊಂಡುವಾಸಿಸುತ್ತಿದ್ದರು. ಕಳೆದ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಹೊರಭಾಗದ ಗೋಡೆ ಗುಡಿಸಲ ಮೇಲೆ ಕುಸಿದಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಪಿಯೂಷ್ ಮೊರ್ಡಿಯಾ ತಿಳಿಸಿದ್ದಾರೆ. ಸುಮಾರು 15 ಮಂದಿ ಇಲ್ಲಿ ವಾಸವಿದ್ದರೆನ್ನಲಾಗಿದೆ […]
ಶೆಡ್ ಮೇಲೆ ಗೋಡೌನ್ ಗೋಡೆ ಕುಸಿದು ನಾಲ್ವರ ಸಾವು
ಹೊಸಕೋಟೆ,ಜು.21- ಕೂಲಿ ಕಾರ್ಮಿಕರು ತಂಗಿದ್ದ ಶೆಡ್ ಮೇಲೆ ವೇರ್ಹೌಸ್ನ ಗೋಡೆ ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಮೂಲತಃ ಬಿಹಾರದ ಮನೋಜ್ಕುಮಾರ್ ಸದಯ್ (35), ರಾಮಕ್ಕುಮಾರ್ ಸದಯ್ (25), ನಿತೀಶ್ ಕುಮಾರ್ ಸದೆಯ (22) ಹಾಗೂ ಮತ್ತೊಬ್ಬರ ಹೆಸರು ತಿಳಿದು ಬಂದಿಲ್ಲ. ನಿರ್ಮಾಣ ಹಂತದ ಸೌಪರ್ಣಿಕಾ ಬಹುಮಹಡಿ ಅಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ತಂಗಲು ತಾತ್ಕಾಲಿಕ ಶೆಡ್ ನಿರ್ಮಿಸಲಾಗಿತ್ತು. […]