ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ,ಫೆ.3 – ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆ ಕುರಿತು ಕೇಂದ್ರ ಸರ್ಕಾರದ ಧೋರಣೆ ಬಗ್ಗೆ ಉನ್ನತ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಮ್ಮನ್ನು ಅನಾನುಕೂಲ ನಿಲುವು ತೆಗೆದುಕೊಳ್ಳುವ ಪರಿಸ್ಥಿತಿಗೆ ದೂಡಬೇಡಿ ಎಂದು ಎಚ್ಚರಿಕೆ ನೀಡಿದೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿಗೆ ನ್ಯಾಯಮೂರ್ತಿಗಳನ್ನು ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿದ್ದ ಹೆಸರುಗಳಿಗೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಸಲ್ಲಿಸಲಾಗಿರುವ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಎ.ಎಸ್.ಓಕಾ ಅವರ ಪೀಠ ವಿಚಾರಣೆ ನಡೆಸುತ್ತಿದೆ. ಇಂದು ನ್ಯಾಯಾಲಯದ […]
ಕೊಲಿಜಿಯಂನ 19 ಹೆಸರುಗಳು ತಿರಸ್ಕಾರ : ಕೇಂದ್ರ – ನ್ಯಾಯಾಂಗ ಸಂಘರ್ಷ..?

ನವದೆಹಲಿ,ನ.30- ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಕೊಲಿಜಿಯಂ ಶಿಫಾರಸ್ಸು ಮಾಡಿದ್ದ 21 ಮಂದಿ ಹೆಸರುಗಳ ಪೈಕಿ 19ನ್ನು ಕೇಂದ್ರ ಸರ್ಕಾರ ತಿರಸ್ಕರಿಸುವ ಮೂಲಕ ಹೊಸ ಬಿಕ್ಕಟ್ಟು ಸೃಷ್ಟಿಯಾಗಿದೆ. ಸುಪ್ರೀಂಕೋರ್ಟ್‍ನ ಎರಡು ತೀರ್ಪುಗಳನ್ನು ಆಧರಿಸಿ ದೇಶದಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಕೊಲಿಜಿಯಂ ರಚನೆಯಾಗಿದೆ. ಹೈಕೋರ್ಟ್, ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿಗಳ ನೇಮಕಾತಿಗೆ ಈ ಕೊಲಿಜಿಯಂ ಹೆಸರುಗಳನ್ನು ಶಿಫಾರಸ್ಸು ಮಾಡಿದೆ. ಅದನ್ನು ಪ್ರಧಾನಮಂತ್ರಿಗಳ ಕಚೇರಿ ಪರಿಶೀಲಿಸುವ ಮೂಲಕ ರಾಷ್ಟ್ರಪತಿಗೆ ಶಿಫಾರಸ್ಸು ಮಾಡಲಿದ್ದು, ನಂತರ ನ್ಯಾಯಮೂರ್ತಿಗಳ ನೇಮಕಾತಿ ಯಾಗಲಿದೆ. ಒಂದು ವೇಳೆ ಪಟ್ಟಿಯಲ್ಲಿ ಲೋಪವಿದ್ದರೆ […]