KSRTCಗೆ ಡಿಕ್ಕಿ ಹೊಡೆದ ಕಾರು, ಚಾಲಕ ದುರ್ಮರಣ

ಬೆಂಗಳೂರು, ಜು. 21- ಏರ್‌ಪೋರ್ಟ್‌ ಕಡೆಗೆ ಹೋಗುತ್ತಿದ್ದ ಕಾರು ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಮಾಗಡಿ ತಾಲ್ಲೂಕಿನ ನಿವಾಸಿ ಲೋಹಿತ್ ಪ್ರಸಾದ್ (24) ಮೃತಪಟ್ಟ ಕಾರು ಚಾಲಕ. ಬೆಂಗಳೂರು- ಬಳ್ಳಾರಿ ರಸ್ತೆಯಲ್ಲಿ ಬೆಳಗಿನ ಜಾವ 3.15ರ ಸುಮಾರಿನಲ್ಲಿ ಏರ್‌ಪೋರ್ಟ್‌ ಕಡೆಗೆ ಕಾರು ಅತಿವೇಗವಾಗಿ ಹೋಗುತ್ತಿತ್ತು. ಬಿಎಸ್‍ಎಫ್ ಕ್ಯಾಂಪಸ್ […]