ಬಸ್‍ಗೆ ಡಿಕ್ಕಿ ಹೊಡೆದ ಕಾರು, ನಾಲ್ವರ ಸಾವು

ಪಾಲ್ಘರ್,(ಮಹಾರಾಷ್ಟ್ರ)ಜ .31 -ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಇಂದು ಮುಂಜಾನೆ ಕಾರೊಂದು ಮುಂದೆ ಚಲಿಸುತ್ತಿದ್ದ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಪಾಲ್ಘರ್ ಜಿಲ್ಲಾ ಕೇಂದ್ರದಿಂದ 100 ಕಿಮೀ ದೂರದ ಮಹಾಲಕ್ಷ್ಮಿ ಸೇತುವೆ ಬಳಿ ಮುಂಜಾನೆ 3.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಅವರೆಲ್ಲರು ಗುಜರಾತ್‍ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದರು ಎಂದು ಕಳಸ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅರೆ ಬೆತ್ತಲೆ ಮಹಿಳೆಯಿಂದ ವಿಮಾನ ಸಿಬ್ಬಂದಿಗೆ ಕಪಾಳಮೋಕ್ಷ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ […]

ಕಾರು-ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ, ಐವರ ಸಾವು

ಆಲಪ್ಪುಳ (ಕೇರಳ), ಜ. 23-ಕಾರು ಮತ್ತು ಟ್ರಕ್ ನಡುವೆ ಮುಂಜಾನೆ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಆಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ. ಮುಂಜಾನೆ 1.30 ರ ಸುಮಾರಿಗೆ ಅಂಬಲಪುಳದ ಬಳಿ ಈ ದುರ್ಘಟನೆ ಸಂಭವಿಸಿದ್ದು ಐವರು ಪ್ರಯಾಣಿಸುತ್ತಿದ್ದ ಕಾರು ವೇಗವಾಗಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟಿರುವ ಐವರೂ ತಿರುವನಂತಪುರಂನಲ್ಲಿರುವ ಇಸ್ರೋ ಕ್ಯಾಂಟೀನ್‍ನಲ್ಲಿ ಗುತ್ತಿಗೆ ನೌಕರರಾಗಿದ್ದು, ಮದುವೆಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.ಅಮಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು […]

ಡಿವೈಡರ್‌ಗೆ ಕಾರು ಡಿಕ್ಕಿ, ಕಾನ್ಸ್‌ಸ್ಟೇಬಲ್‌ಗ‌ಳಿಗೆ ಗಾಯ

ಯಾದಗಿರಿ, ಜ.19- ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಹೆಡ್ ಕಾನ್ಸ್‍ಸ್ಟೇಬಲ್‍ಗಳು ಗಾಯಗೊಂಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೆಪೊಲೀಸ್ ಠಾಣೆಯ ಹೆಡ್ ಕಾನ್ಸ್‍ಸ್ಟೇಬಲ್‍ಗಳಾದ ಮಂಜುನಾಥ್, ನರೇಶ್, ಶ್ರೀನಿವಾಸ್ ಗಾಯಗೊಂಡವರು. ಪ್ರಕರಣವೊಂದರ ಸಂಬಂಧ ಇವರು ಬಳ್ಳಾರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಅಶೋಕ್ ಸಿz್ದದ್ದಾಪುರ ಬಳಿ ಲಾರಿ ಓವರ್ ಟೆಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಹೆಡ್ ಕಾನ್ಸ್‍ಸ್ಟೇಬಲ್‍ಗಳು […]

ಟ್ರ್ಯಾಕ್ಟರ್‌ಗೆ ಕ್ರೂಸರ್ ಡಿಕ್ಕಿ, ದಂಪತಿ ಸಾವು

ವಿಜಯಪುರ, ಅ.27- ಕಬ್ಬು ಸಾಗಾಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್‍ಗೆ ಹಿಂಬದಿಯಿಂದ ಬಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳ್‍ಖೇಡ್ ಬಳಿಯ ಎನ್‍ಎಚ್-50ರಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಬಯ್ಯಾಜಿ ಶಿಂಧೆ (50) ಹಾಗೂ ಅವರ ಪತ್ನಿ ಸುಮಿತ್ರಾ ಶಿಂಧೆ (40) ಮೃತಪಟ್ಟ ದಂಪತಿ. ಘಟನೆಯಲ್ಲಿ 9 ಜನರಿಗೆ ಗಾಯಗಳಾಗಿದ್ದು, ಅವರನ್ನು ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಟಿ ಕಂಠ ಗಾಯನ : 1 […]

ಡಬಲ್ ಡೆಕ್ಕರ್ ಬಸ್‍ಗೆ ಕಂಟೈನರ್ ಡಿಕ್ಕಿ, ನಾಲ್ವರು ಸಾವು

ಲಕ್ನೋ,ಅ.23- ಉತ್ತರಪ್ರದೇಶದ ಎಕ್ಸ್‍ಪ್ರೆಸ್ ವೇ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವು, 42 ಮಂದಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಇಟಾವಾ ಬಳಿ ಲಕ್ನೋ-ಆಗ್ರಾ ಎಕ್ಸ್‍ಪ್ರೆಸ್‍ವೇಯಲ್ಲಿ ಕಂಟೈನರ್ ಮತ್ತು ಡಬಲ್ ಡೆಕ್ಕರ್ ಬಸ್ ನಡುವಿನ ಮುಖಾಮುಖಿಯಿಂದ ಈ ದುರಂತ ಸಂಭವಿಸಿದೆ. ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 42 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿರುವ 42ಕ್ಕೂ ಹೆಚ್ಚು ಪ್ರಯಾಣಿಕರನ್ನು ಸಫಾಯಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ವಿಧಾನಸಭೆ ಡೆಪ್ಯುಟಿ ಸ್ಪೀಕರ್ […]

ಸ್ಕೂಟರ್‌ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ : ಮಹಿಳೆ ಗಂಭೀರ

ಬೆಂಗಳೂರು,ಅ.17- ರಸ್ತೆ ಗುಂಡಿ ತಪ್ಪಿಸಲು ಸ್ಕೂಟರನ್ನು ಬಲಭಾಗಕ್ಕೆ ಚಲಾಯಿಸಿದ್ದರಿಂದ ಹಿಂದೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಸ್ಕೂಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗಳು ಗಾಯಗೊಂಡಿರುವ ಘಟನೆ ವಾಟಾಳ್ ನಾಗರಾಜ್ ರಸ್ತೆಯ ಲುಲು ಮಾಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಗಾಯತ್ರಿನಗರದ ನಿವಾಸಿ ಉಮಾ(42) ಗಂಭೀರ ಗಾಯಗೊಂಡಿದ್ದು, ವನಿತಾ(22)ರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ವನಿತಾ ಅವರು ತಾಯಿ ಉಮಾ ಅವರನ್ನು ಸ್ಕೂಟರ್‍ನಲ್ಲಿ ಕೂರಿಸಿಕೊಂಡು ಶ್ರೀನಗರದಿಂದ ಇಂದು ಬೆಳಗ್ಗೆ ಬರುತ್ತಿದ್ದಾಗ ಲುಲು ಮಾಲ್ ಬಳಿಯ ಗುಂಡಿ ಗಮನಿಸಿ, […]

ಕ್ರೂಸರ್‌‌ಗೆ ಬಸ್ ಡಿಕ್ಕಿ, ಮೂವರ ದುರ್ಮರಣ

ಹುಬ್ಬಳ್ಳಿ, ಆ.22- ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಶವ ತರಲು ಕ್ರೂಸರ್‍ನಲ್ಲಿ ಹೊರಟ್ಟಿದ್ದವರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಘಟಗಿಯ ರಾಮನಾಳ ಕ್ರಾಸ್ ಬಳಿ ನಡೆದಿದೆ. ಹಳಿಯಾಳ ತಾಲ್ಲೂಕಿನ ನಂದಿಘಟ್ಟ ಗ್ರಾಮದ ಶಿವನಗೌಡ ಪಾಟೀಲ್, ಅಮೃತಪಾಟೀಲ್ ಮೃತಪಟ್ಟಿದ್ದು, ಮತ್ತೊಬ್ಬರ ಹೆಸರು ತಿಳಿದು ಬಂದಿಲ್ಲ. ಇವರು ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ಶವ ತರಲು ಕ್ರೂಸರ್‍ನಲ್ಲಿ ತೆರಳುತ್ತಿದ್ದಾಗ. ಎದುರಿಗೆ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರಿಗೆ […]