ಪ್ರತಿಪಕ್ಷಗಳ ಕೂಟವನ್ನು ಭ್ರಷ್ಟರ ಕೂಟಕ್ಕೆ ಹೊಲಿಸಿದ ಮೋದಿ

ನವದೆಹಲಿ,ಮಾ.29-ರಾಹುಲ್‍ಗಾಂಧಿ ಅನರ್ಹತೆ ಕುರಿತಂತೆ ಒಗ್ಗಟ್ಟು ಪ್ರದರ್ಶಿಸಿರುವ ಪ್ರತಿಪಕ್ಷಗಳ ಕೂಟವನ್ನು ಭ್ರಷ್ಟರ ಒಗ್ಗೂಡುವಿಕೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಕೇಂದ್ರೀಯ ಸಂಸ್ಥೆಗಳ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‍ಗೆ ಹೋಗಲು 14 ಪಕ್ಷಗಳ ನಿರ್ಧಾರ ಕುರಿತಂತೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ಅವರು, ನಾವು ಸಾಂವಿಧಾನಿಕ ಸಂಸ್ಥೆಗಳ ಬಲವಾದ ಅಡಿಪಾಯವನ್ನು ಹೊಂದಿದ್ದೇವೆ. ಹೀಗಾಗಿಯೇ ಪ್ರತಿಪಕ್ಷಗಳು ಭ್ರಷ್ಟರ ಕೂಟ ರಚಿಸಿಕೊಂಡಿವೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ತನಿಖಾ ಸಂಸ್ಥೆಗಳು ಕ್ರಮ ಕೈಗೊಂಡಾಗ ದಾಳಿ ಮಾಡಲಾಗುತ್ತಿದೆ, ನ್ಯಾಯಾಲಯಗಳಲ್ಲಿ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಕೆಲವು […]
ಈಶಾನ್ಯ ರಾಜ್ಯಗಳಲ್ಲಿ CAA ಜಾರಿ ಮಾಡಲು ಬೀಡಲ್ಲ: ಮಮತಾ

ಶಿಲ್ಲಾಂಗ್,ಫೆ.23- ಹೊರಗಿನಿಂದ ಬಂದವರು ಈಶಾನ್ಯ ರಾಜ್ಯಗಳಲ್ಲಿ ಸಿಎಎ ಮತ್ತು ಎನ್‍ಆರ್‍ಸಿ ಹೇರಲು ನಮ್ಮ ಪಕ್ಷ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಫೆ.27ರಂದು ನಡೆಯಲಿರುವ ಮೇಘಾಲಯ ಚುನಾವಣೆ ಅಂಗವಾಗಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಅವರು, ಕಾನ್ರಾಡ್ ಸಂಗ್ಮಾ ನೇತೃತ್ವದ ಸರ್ಕಾರ ಯಾವುದೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ ವಿವಿಧ ಹಗರಣಗಳಲ್ಲಿ ತೊಡಗಿಸಿಕೊಂಡಿದೆ ಎಂದು ಅವರು ಆರೋಪ ಮಾಡಿದ್ದಾರೆ. […]