ಸಮಿತಿ ವರದಿ ನಂತರ ಬಂದ ಪಂಚಮಸಾಲಿಗೆ ಮೀಸಲಾತಿ ಕುರಿತು ನಿರ್ಧಾರ

ಬೆಳಗಾವಿ,ಡಿ.20- ಪಂಚಮಸಾಲಿ ಸಮುದಾಯದವರಿಗೆ ಮೀಸಲಾತಿ ನೀಡುವ ಕುರಿತು ಸರ್ಕಾರ ಈಗಾಗಲೇ ಸಮಿತಿ ರಚಿಸಿ ವರದಿ ನೀಡಲು ಸೂಚನೆ ನೀಡಲಾಗಿದೆ. ಸಮಿತಿ ವರದಿ ನೀಡಿದ ಬಳಿಕ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುವರ್ಣಸೌಧದಲ್ಲಿಂದು ಮಾತನಾಡಿದ ಅವರು, ಪಂಚಮಸಾಲಿ ಸಮುದಾಯದವರಿಗೆ ಮೀಸಲಾತಿ ನೀಡುವ ಕುರಿತು ಸಮಿತಿ ರಚಿಸಲಾಗಿದೆ. ಸಮಿತಿ ವರದಿ ಮಂಡಿಸಿದ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.ಮಾಜಿ ಸಚಿವರಾದ ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅವರು ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, […]