“ಕೋಮುದ್ವೇಷದ ವಿಷ ಬೀಜ ಬಿತ್ತಲು ತನು-ಮನ-ಧನ ಅರ್ಪಿಸುವ ಪಕ್ಷ ಬಿಜೆಪಿ”

ಬೆಂಗಳೂರು,ಮಾ.13- ಕಪೋಲ ಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷ ಹರಡಿ, ಜನರ ತಲೆಯಲ್ಲಿ ವಿಷ ಬೀಜ ಬಿತ್ತಿ ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೆಂದರೆ ಬಿಜೆಪಿ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಟಿಪ್ಪು ಸುಲ್ತಾನನನ್ನು ಕೊಂದವರು ಎನ್ನಲಾಗುವ ಕಾಲ್ಪನಿಕ ಪಾತ್ರಗಳಾದ ಉರಿಗೌಡ, ನಂಜೇಗೌಡ ಎಂಬ ಹೆಸರುಗಳನ್ನು ಪ್ರಧಾನಿ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಏಕೆ ಎಂದು ಪ್ರಶ್ನಿಸಿದೆ. ಮಹಾದ್ವಾರಕ್ಕೆ ಇದ್ದ ಒಕ್ಕಲಿಗರ ಗುರು ಆದಿಚುಂಚನಗಿರಿ ಪೀಠಾಧ್ಯಕ್ಷರಾಗಿದ್ದ ಡಾ. ಶ್ರೀ ಬಾಲಗಂಗಾಧರನಾಥ […]

ಕೋಮುಗಲಭೆಯ ಆರೋಪಿಗಳು ದೋಷ ಮುಕ್ತ

ಅಯೋಧ್ಯೆ,ಜ.18- ಉತ್ತರ ಪ್ರದೇಶದ ಫೈಜಾಬಾದ್‍ನಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಘಟಿಸಿದ್ದ ಕೋಮುಗಲಭೆಯ ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ದೋಷ ಮುಕ್ತರೆಂದು ಘೋಷಿಸಲಾಗಿದೆ. 2012ರ ಅಕ್ಟೋಬರ್ 24ರಂದು ಫೈಜಾಬಾದ್‍ನಲ್ಲಿ ದುರ್ಗಾದೇವಿಯ ಮೆರವಣಿಗೆ ನಡೆದಿತ್ತು. ದೇವರ ಮೂರ್ತಿಗಳ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸುತ್ತಿದ್ದಾರೆ ಎಂಬ ವದಂತಿ ವ್ಯಾಪಕವಾಗಿ ಹರಡಲಾರಂಭಿಸಿತ್ತು. ಇದರಿಂದಾಗಿ ಭುಗಿಲೆದ್ದ ಗಲಭೆಯಲ್ಲಿ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದರು. ಹತ್ತಾರು ಅಂಗಡಿಗಳು ಮತ್ತು ಮನೆಗಳನ್ನು ಸುಟ್ಟುಹಾಕಲಾಯಿತು, ವ್ಯಾಪಕ ಲೂಟಿ ನಡೆದಿತ್ತು. ಪೊಲೀಸ್ ವಾಹನಗಳಿಗೆ ಪುಂಡರ ಗುಂಪು ಬೆಂಕಿ ಹಚ್ಚಿದ್ದಲ್ಲದೆ, ಪೊಲೀಸ್ […]

ಎಸ್‍ಡಿಪಿಐನಿಂದ ಕೋಮು ಗಲಭೆ ಸಂಚು : ಸಿಎಂ ಬೊಮ್ಮಾಯಿ

ಬೆಂಗಳೂರು,ಆ.23- ಸೂಕ್ಷ್ಮ ಪ್ರದೇಶವಾಗಿರುವ ಮಡಿಕೇರಿಯಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಶುಕ್ರವಾರ ಕೋಮುಗಲಭೆ ಸೃಷ್ಟಿಸುವ ಸಾಧ್ಯತೆ ಇರುವುದರಿಂದ ಇಲ್ಲಿ ಯಾವುದೇ ರೀತಿಯ ಸಭೆ, ಸಮಾರಂಭ ನಡೆಸಲು ಅವಕಾಶ ಕೊಡಬಾರದು ಎಂದುಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಶುಕ್ರವಾರ ಮಡಿಕೇರಿಯಲ್ಲಿ ರಾಜಕೀಯ ಸಮಾವೇಶಗಳನ್ನು ನಡೆಸಲು ಉದ್ದೇಶಿಸಿತ್ತು. ಜಿಲ್ಲಾಡಳಿತ ನಾಳೆ ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ 144 ಸೆಕ್ಷನ್ ವಿಸಿದೆ. ಇದರ ಬೆನ್ನಲ್ಲೇ ಗುಪ್ತಚರ ವಿಭಾಗವು ಸಿಎಂ ಬೊಮ್ಮಾಯಿ ಅವರಿಗೆ ವರದಿಯೊಂದನ್ನು ನೀಡಿದ್ದು, ಸಾರ್ವಜನಿಕರ ಹಿತರಕ್ಷಣೆ ಹಾಗೂ ಕಾನೂನು […]