ಚರ್ಮಗಂಟು ರೋಗ : ಮೃತ ಜಾನುವಾರುಗಳ ಮಾಲೀಕರಿಗೆ ಪರಿಹಾರ ನೀಡಲು 30 ಕೋಟಿ ಬಿಡುಗಡೆ

ಬೆಂಗಳೂರು,ಡಿ.13- ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಪ್ರಕರಣದಲ್ಲಿ ಮಾಲೀಕರಿಗೆ ಪರಿಹಾರ ನೀಡಲು 30 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಚರ್ಮಗಂಟು ರೋಗದಿಂದ ಬಳಲಿ ಮೃತಪಟ್ಟ ಜಾನುವಾರುಗಳ ಮಾಲೀಕರು ಮತ್ತು ರೈತರ ಆರ್ಥಿಕ ನಷ್ಟವನ್ನು ತಪ್ಪಿಸಲು ಮೃತ ರಾಸುಗಳಿಗೆ ಪರಿಹಾರ ನೀಡಲು 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿಂದೆ 7 ಕೋಟಿ ರೂ. ಪರಿಹಾರ […]

ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ 10,000 ಪರಿಹಾರ : ಸಿಎಂ ಸೂಚನೆ

ಬೆಂಗಳೂರು,ಆ.29- ರಾಜ್ಯದ ವಿವಿಧೆಡೆ ಮತ್ತೆ ಭಾರೀ ಮಳೆಯಾಗುತ್ತಿದ್ದು ತಕ್ಷಣವೇ ಅಧಿಕಾರಿಗಳು ಸಾರ್ವಜನಿಕರು ಮತ್ತು ಜಾನುವಾರುಗಳ ರಕ್ಷಣೆಗೆ ಆದ್ಯತೆ ನೀಡಬೇಕೆಂದು ಸೂಚಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾನಿಗೊಳಗಾದ ಮನೆಗಳಿಗೆ ತಕ್ಷಣವೇ 10 ಸಾವಿರ ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, 16 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಮೊದಲು ಸಂಕಷ್ಟಕ್ಕೆ ಸಿಲುಕಿರುವ ಜನರು ಮತ್ತು ಜಾನುವಾರುಗಳನ್ನು ರಕ್ಷಣೆ ಮಾಡಲು ಸೂಚಿಸಿರುವುದಾಗಿ ತಿಳಿಸಿದರು. ಎಲ್ಲೆಲ್ಲಿ ಮಳೆಯಿಂದ ಮನೆಗಳು ಹಾನಿಗೊಳಗಾಗಿವೆಯೋ […]

BREAKING: ಶಿರಾ ಅಪಘಾತ : ಮೃತಪಟ್ಟವರ ಕುಟುಂಬಗಳಿಗೆ ತಲಾ 2ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

ನವದೆಹಲಿ,ಆ.25-ಕರ್ನಾಟಕದ ತುಮಕೂರಿನ ಶಿರಾ ಬಳಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರಮೋದಿ ಅವರು ಎರಡು ಲಕ್ಷ ಪರಿಹಾರ ಘೋಷಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ತುರ್ತು ಪರಿಹಾರ ನಿಯಡಿ ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ ಹಾಗೂ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಇನ್ನು ಅಪಘಾತಕ್ಕೆ ತೀವ್ರ ಕಂಬನಿ ಮಿಡಿದಿರುವ ಪ್ರಧಾನಿ ಮೋದಿ ಅವರು ಈ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಯಿತು. ಅಪಘಾತದಲ್ಲಿ ಜೀವ […]

ಅತಿವೃಷ್ಟಿಯಿಂದ ನಲುಗಿದ ಕರ್ನಾಟಕ, ನೆರವಿಗಾಗಿ ಕೇಂದ್ರಕ್ಕೆ ಮೊರೆ

ಬೆಂಗಳೂರು,ಆ.7- ಕಳೆದ ಜೂನ್‍ನಿಂದ ಶುರುವಾಗಿರುವ ಭಾರಿ ಮಳೆಯಿಂದ ರಾಜ್ಯದಲ್ಲಿ ಸಂಭವಿಸಿರುವ ಸಾವಿರಾರು ಕೋಟಿ ರೂ.ಗಳ ನಷ್ಟ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಇನ್ನೆರಡು ದಿನಗಳಲ್ಲಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಕೈಗೊಂಡಿದೆ. ರಾಜ್ಯದ ಸುಮಾರು 21 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಸುಮಾರು 71ಮಂದಿ ಜೀವ ಹಾನಿಯಾಗಿದೆ. 500ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ. ಕೃಷಿ ಹಾಗೂ ತೋಟಗಾರಿಕೆಯ 1.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಗ್ರಾಮೀಣ ಪ್ರದೇಶ ಹಾಗೂ ಮುಖ್ಯ ರಸ್ತೆಗಳು ಸೇರಿ 13 ಸಾವಿರ ಕಿ.ಮೀ.ನಷ್ಟು ರಸ್ತೆ […]

ಮಳೆ ಹಾನಿ: ಸಿ ಕೆಟಗರಿ ಮನೆಗಳಿಗೆ ಪರಿಹಾರ ನೀಡಲು ಸರ್ಕಾರ ಸೂಚನೆ

ಬೆಂಗಳೂರು,ಜು.ಆ.3- ಪ್ರವಾಹದಿಂದಾದ ಮನೆ ಹಾನಿಗೆ ಪರಿಹಾರ ಪಡೆದ ಸಂತ್ರಸ್ತರ ಮನೆಗಳು ಪುನಃ ಹಾನಿಯಾದರೆ ಪರಿಹಾರಕ್ಕೆ ಪರಿಗಣಿಸುವ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ. ಸಿ ಕೆಟಗರಿ ಪರಿಹಾರ ಪಡೆದಿರುವ ಮನೆಗಳು ಹಾನಿಯಾಗಿದ್ದರೆ ಮಾತ್ರ ಪರಿಗಣಿಸಬಹುದೆಂದು ಸರ್ಕಾರ ಹೊಸ ಆದೇಶ ಹೊರಡಿಸಿದೆ. ಈ ಬಗ್ಗೆ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಲವು ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನಡೆಸಿದ ವೇಳೆ ಈ ಹಿಂದೆ ಪರಿಹಾರ ಪಡೆದು ಮನೆಗಳು ಹಾನಿಗೊಳಗಾಗಿದ್ದರೆ ಪರಿಹಾರ ನೀಡುವ ಬಗ್ಗೆ ಯಾವ ಕ್ರಮ ಕೈಗೊಳ್ಳಬೇಕೆಂದು ಸರ್ಕಾರ […]