100ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೋ ಯಾತ್ರೆ

ದೌಸ್ಸಾ(ರಾಜಸ್ತಾನ್),ಡಿ.16- ಭಾರತ್ ಜೋಡೋ ಯಾತ್ರೆ 100ನೇ ದಿನ ಪೂರೈಸಿದ್ದು, ಇಂದು ರಾಜಸ್ತಾನದಲ್ಲಿ ನಡೆದ ಪಾದಯಾತ್ರೆಯಲ್ಲಿ ಹಿಮಾಚಲ ಪ್ರದೇಶದ ಪ್ರಮುಖ ನಾಯಕರು ಹೆಜ್ಜೆ ಹಾಕಿದರು. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತಗಳಿಸಿ ಅಧಿಕಾರ ಹಿಡಿದಿದೆ. ಚುನಾವಣೆ ನೇತೃತ್ವವಹಿಸಿದ್ದ ಪ್ರತಿಭಾಸಿಂಗ್, ನೂತನ ಮುಖ್ಯಮಂತ್ರಿ ಸುಖವಿಂದರ್‍ ಸಿಂಗ್, ಉಪ ಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ ಅವರು 100ನೇ ದಿನದ ಯಾತ್ರೆಯಲ್ಲಿ ರಾಹುಲ್‍ಗಾಂಧಿ ಅವರ ಅಕ್ಕಪಕ್ಕದಲ್ಲಿ ಹೆಜ್ಜೆ ಹಾಕಿದರು. ಪ್ರತಿಭಾ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯಸಿಂಗ್ ಕೂಡ ಹೆಜ್ಜೆ […]

ಮತ್ತೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ರಾಜ್ಯಾದ್ಯಂತ ಬಿಜೆಪಿ ಸಾಧನ ಸಮಾವೇಶ

ಬೆಂಗಳೂರು,ಜು.27- ಕರ್ನಾಟಕದಲ್ಲಿ ಪಕ್ಷಕ್ಕೆ ಮ್ಯಾಜಿಕ್ ನಂಬರ್ (113) ದಕ್ಕಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಕಾರ್ಯತಂತ್ರ ರೂಪಿಸುತ್ತಿದೆ. ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂದು ಪಣತೊಟ್ಟಿರುವ ಹೈಕಮಾಂಡ್, ಪ್ರಚಾರಕ್ಕೆ ಭರ್ಜರಿ ಕಾರ್ಯತಂತ್ರ ಹೆಣೆದಿದೆ. ಡಿಸೆಂಬರ್‍ನಲ್ಲಿ ನಡೆಯಲಿರುವ ಗುಜರಾತ್ ಚುನಾವಣೆ ಮುಗಿಯುತ್ತಿದ್ದಂತೆ ದೆಹಲಿ ನಾಯಕರು ಸಂಪೂರ್ಣವಾಗಿ ಕರ್ನಾಟಕದ ಕಡೆ ಗಮನ ಕೇಂದ್ರೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರಂತರವಾಗಿ […]