ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ರಾಜ್ಯಮಟ್ಟದ ಅರ್ಚಕರ ಸಮಾವೇಶ

ಬೆಂಗಳೂರು ಜುಲೈ 18: ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳ ಅರ್ಚಕರ ರಾಜ್ಯಮಟ್ಟದ ಸಮಾವೇಶವನ್ನು ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ಆಯೋಜಿಸಲಾಗುವುದು ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ತಿಳಿಸಿದರು. ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ 3ನೇ ರಾಜ್ಯ ಧಾರ್ಮಿಕ ಪರಿಷತ್ತಿನ 16 ನೇ ಸಭೆಯಲ್ಲಿ ರಾಜ್ಯದ ಹಲವಾರು ಧಾರ್ಮಿಕ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರಗಳನ್ನು ತಗೆದುಕೊಳ್ಳಲಾಯಿತು. ರಾಜ್ಯ ಸರಕಾರ ಮುಜರಾಯಿ ಅರ್ಚಕರ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹೊರತಂದಿದೆ. […]