ವನ್ಯಪ್ರಾಣಿ ದಾಳಿಯಿಂದ ಸಾವನ್ನಪ್ಪಿದರೆ 15 ಲಕ್ಷ ಪರಿಹಾರ

ಬೆಂಗಳೂರು, ಫೆ.17- ಮಾನವ- ವನ್ಯಪ್ರಾಣಿ ಸಂಘರ್ಷದಿಂದ ಸಂಭವಿಸುವ ಮಾನವ ಪ್ರಾಣ ಹಾನಿಗೆ ನೀಡುವ ಪರಿಹಾರವನ್ನು 7.50 ಲಕ್ಷ ರೂ. ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಬೆಳೆಹಾನಿ ಪ್ರಕರಣಗಳಲ್ಲಿ ನೀಡುತ್ತಿರುವ ಪರಿಹಾರ ಧನವನ್ನೂ ದ್ವಿಗುಣಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‍ನಲ್ಲಿ ತಿಳಿಸಿದರು. ಮಾನವ- ಪ್ರಾಣಿ ಸಂಘರ್ಷವನ್ನು ನಿಯಂತ್ರಿಸಲು, ಸಂಘರ್ಷ ಕ್ಷೇತ್ರದಿಂದ ಸೆರೆಹಿಡಿಯಲ್ಪಟ್ಟ ವನ್ಯ ಪ್ರಾಣಿಗಳನ್ನು, ಅವುಗಳ ನೈಸರ್ಗಿಕ ಆವಾಸ ಸ್ಥಾನ ಪ್ರದೇಶಗಳನ್ನು ಗುರುತಿಸಿ ಬಿಡುಗಡೆ ಮಾಡಲು ಭದ್ರಾ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನ ವನಗಳಲ್ಲಿ […]