ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ

ಬೆಂಗಳೂರು,ಫೆ.25- ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿಕೊಂಡಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್‍ಗೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬೆಳಗ್ಗೆ ಜಯಶಂಕರ್ ಜೊತೆ ದೂರವಾಣಿ ಜೊತೆ ಮಾತುಕತೆ ನಡೆಸಿ ಉಕ್ರೇನ್‍ನಲ್ಲಿ ಎಂಬಿಬಿಎಸ್ ಸೇರಿದಂತೆ ವಿವಿಧ ವ್ಯಾಸಂಗಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತರಲು ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದ್ದೇವೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಮಾಹಿತಿ ಪ್ರಕಾರ ರಾಜ್ಯದ […]